ಕರ್ನಾಟಕ

karnataka

ETV Bharat / state

ಬೆಳಗಾವಿ: ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕಿ ಸಾವು - Dengue Case

ಬೆಳಗಾವಿಯಲ್ಲಿ ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 11 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

DENGUE CASE
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Jul 11, 2024, 7:27 PM IST

ಬೆಳಗಾವಿ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ 11 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ನಡೆದಿದೆ. ಸಂಕೇಶ್ವರದ ಶ್ರೇಯಾ ಕೃಷ್ಣ ದಾವದಾಟೆ (11) ಮೃತ ದುರ್ದೈವಿ ಬಾಲಕಿ.

ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿ ಜುಲೈ 8ರಂದು ಸಂಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಾಲಕಿಗೆ ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಗುರುವಾರ ಚಿಕಿತ್ಸೆಗೆ ಸ್ಪಂದಿಸದೇ ಬಾಲಕಿ ಮೃತಪಟ್ಟಿದ್ದಾಳೆ.

ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈವರೆಗೆ ಜಿಲ್ಲೆಯಲ್ಲಿ 1,500 ಶಂಕಿತ ಡೆಂಗ್ಯೂ ಪ್ರಕರಣಗಳ ಪರೀಕ್ಷೆ ಮಾಡಲಾಗಿದ್ದು, 209 ಮಂದಿಗೆ ಸೋಂಕು ದೃಢಪಟ್ಟಿದೆ.

ಈ ಸಂಬಂಧ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಮಾಹಿತಿ ನೀಡಿದ್ದು, ಬಾಲಕಿಯ ರಕ್ತದ ಮಾದರಿಗಳನ್ನು ರ್‍ಯಾಪಿಡ್‌ ಪರೀಕ್ಷೆಗೆ ಒಳಪಡಿಸಿದಾಗ ಡೆಂಗ್ಯೂ ತಗುಲಿದ್ದು ಸ್ಪಷ್ಟವಾಗಿದೆ. ಆದರೆ, ಬೆಳಗಾವಿಯ ಪ್ರಯೋಗಾಲಯದಲ್ಲಿ ಪಿಸಿಆರ್‌ ತಪಾಸಣೆ ಮಾಡಿದ ಕಾಲಕ್ಕೆ ನೆಗೆಟಿವ್‌ ಬಂದಿದೆ. ಟೈಫೈಡ್‌ ಹಾಗೂ ಸೆಪ್ಟಿಮಿಯಾ ಎಂಬ ಕಾಯಿಲೆಗಳು ಕೂಡ ಬಾಲಕಿಗೆ ಅಂಟಿಕೊಂಡಿದ್ದವು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಗೆ ವೆಂಟಿಲೇಟರ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದರು.

ಇದನ್ನೂ ಓದಿ:ಮಹಾಮಾರಿ ಭೀತಿ: ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆ! - Dengue Cases

ABOUT THE AUTHOR

...view details