ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ; ಘಟಕ ವೆಚ್ಚದಲ್ಲಿ ಇಳಿಕೆ - Chief Minister One Lakh House - CHIEF MINISTER ONE LAKH HOUSE

ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ 1 ಲಕ್ಷ ರೂ. ಹೊರೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

housing scheme
ಮುಖ್ಯಮಂತ್ರಿ ಸಿದ್ದರಾಮಯ್ಯ, ಇತರರು (ETV Bharat)

By ETV Bharat Karnataka Team

Published : Jul 25, 2024, 7:52 PM IST

ಬೆಂಗಳೂರು:ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಅಡಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಿಜೆಪಿ ಸರ್ಕಾರದಲ್ಲಿ ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರದಿಂದ ಆತಂಕಗೊಂಡಿದ್ದ 12,153 ಕುಟುಂಬಗಳಿಗೆ ಖುಷಿ ಸಮಾಚಾರ ಸಿಕ್ಕಿದೆ. ಪ್ರತಿ ಮನೆಗೆ ಒಂದು ಲಕ್ಷ ರೂ.ನಂತೆ 121 ಕೋಟಿ 53 ಲಕ್ಷ ರೂ.ಗಳನ್ನು ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದೆ.

ವಸತಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಗುರುವಾರ ಸಂಜೆ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿಯವರ ಮನವೊಲಿಸುವಲ್ಲಿ ಯಶಸ್ವಿಯಾದರು. ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಗೆ 2017ರ ಸೆಪ್ಟೆಂಬರ್ 23ರಂದು ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರದ 1.50 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ ಸಾಮಾನ್ಯ ವರ್ಗಕ್ಕೆ 1.20 ಲಕ್ಷ ರೂ., ಎಸ್​​ಟಿ - ಎಸ್​ಸಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು.

ನಂತರ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿ ಸರ್ಕಾರದಲ್ಲಿ ಘಟಕ ವೆಚ್ಚ 10 ಲಕ್ಷದ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. ಜಿಎಸ್​​ಟಿ ಸೇರಿ 11 ಲಕ್ಷದ 20 ಸಾವಿರ ರೂ. ಆಗಿತ್ತು.

ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು. ಇದೀಗ ಸರ್ಕಾರದ ಮಹತ್ವದ ತೀರ್ಮಾನದಿಂದ ಸಬ್ಸಿಡಿ ಹೊರತುಪಡಿಸಿ ಸಾಮಾನ್ಯ ವರ್ಗ 7.50 ಲಕ್ಷ ರೂ., ಎಸ್​ಸಿ -ಎಸ್​​ಟಿ ವರ್ಗ 6.70 ಲಕ್ಷ ರೂ. ಕಟ್ಟಬೇಕಾಗುತ್ತದೆ. ಇದರಿಂದ 12,153 ಕುಟುಂಬಗಳಿಗೆ ನೆರವಾಗಲಿದೆ.

ಈ ಹಿಂದೆ ಕ್ರಮವಾಗಿ 8.50 ಲಕ್ಷ ಹಾಗೂ 7.70 ಲಕ್ಷ ರೂ. ಕಟ್ಟಬೇಕಿತ್ತು. ಈ ತೀರ್ಮಾನ 2020ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡಿರುವ 12,153 ಮಂದಿಗೆ ಮಾತ್ರ ಅನ್ವಯವಾಗಲಿದೆ. ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡದ ಆನ್​ಲೈನ್ ಅರ್ಜಿಗಳಿಗೆ ಅನ್ವಯ ಆಗದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ಉದ್ಯಮ, ಇಲಾಖೆಗಳ ಅನಗತ್ಯ ವೆಚ್ಚದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ: ಸಿಎಜಿ ವರದಿ - CAG REPORT ON LOSS

ABOUT THE AUTHOR

...view details