ಬೆಂಗಳೂರು: ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಸಿಬ್ಬಂದಿಗೆ ಕೆಎಸ್ಆರ್ಟಿಸಿ ಉಡುಗೊರೆ ನೀಡಿದೆ. ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು ರೂ. 84 ಕೋಟಿ ಪಾವತಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗು ಕೆಎಸ್ಆರ್ಟಿಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ನಿರ್ದೇಶನದಂತೆ ಆದೇಶ ಹೊರಡಿಸಲಾಗಿದೆ.
ಕೆಎಸ್ಆರ್ಟಿಸಿಯ ಸಿಬ್ಬಂದಿಗಳಿಗೆ (ಸದರಿ ಅವಧಿಯಲ್ಲಿನ ನಿವೃತ್ತ ಸಿಬ್ಬಂದಿಗಳನ್ನು ಸೇರಿ) 2022-23 ಮೇ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತ ರೂ.24 ಕೋಟಿಯನ್ನು ಹಾಗೂ ಜುಲೈ-2022 ರಿಂದ ನವೆಂಬರ್-2022 ರ ವರ್ಷದ 5 ತಿಂಗಳು, ಜನವರಿ-2023 ರಿಂದ ಜುಲೈ-2023 ರವರೆಗಿನ 7 ತಿಂಗಳು ಮತ್ತು ಜುಲೈ-2023 ರಿಂದ ಅಕ್ಟೋಬರ್-2023 ರವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ ರೂ.54 ಕೋಟಿಯನ್ನು ಪಾವತಿಸಲು ಆದೇಶಿಸಲಾಗಿದೆ.