ಚಾಮರಾಜನಗರ: ಭಾರತದ ನಯಾಗರ ಎಂದೇ ಪ್ರಸಿದ್ಧಿಯಾಗಿರುವ ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತಕ್ಕೆ ತೆರಳುವ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕೇರಳದ ವಯನಾಡ್‌ನಲ್ಲಿ ಅಪಾರ ಪ್ರಮಾಣದ ಮಳೆಯಾಗಿ ಕಬಿನಿ ಜಲಾಶಯ ಭರ್ತಿಯಾಗಿದ್ದು, ಜಲಾಶಯದಿಂದ 70 ಸಾವಿರ ಕ್ಯೂಸೆಕ್ ಹಾಗೂ ಕೆಆರ್ಎಸ್ ಜಲಾಶಯದಿಂದ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿತ್ತು. ಹೀಗಾಗಿ ಹೊಗೇನಕಲ್ ಫಾಲ್ಸ್ನಲ್ಲಿ ಕಾವೇರಿ ರುದ್ರ ನರ್ತನ ಉಂಟಾಗಿ ಜಲಪಾತವೇ ಮುಚ್ಚಿ ಹೋಗಿತ್ತು. ಈ ಹಿನ್ನೆಲೆಯಲ್ಲಿ ಕಾವೇರಿ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಬರುವ ಗೋಪಿನಾಥಂ ವಲಯ ಅರಣ್ಯ ಅಧಿಕಾರಿಗಳು ಜುಲೈ 20ರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದರು.