ಗಂಗಾವತಿ(ಕೊಪ್ಪಳ):ಹಂಪಿ ಪ್ರವಾಸಕ್ಕೆ ಹೊರಟಿದ್ದ ಕಲಬುರಗಿಯ ಗುರುಮಿಟ್ಕಲ್‌ನ ಶಾಲಾ ಮಕ್ಕಳಿದ್ದ ಸಾರಿಗೆ ಬಸ್ ಗಂಗಾವತಿಯ ಮರಳಿ ಸಮೀಪರಸ್ತೆ ಬದಿಯ ಹೊಲಕ್ಕೆ ಉರುಳಿದೆ. ಇಂದು ಬೆಳಗ್ಗೆ 4:30ರ ಸುಮಾರಿಗೆ ಘಟನೆ ನಡೆದಿದೆ. ಅದೃಷ್ಟವಶಾತ್, ಬಸ್‌ನಲ್ಲಿದ್ದ 60 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವ ವಿದ್ಯಾರ್ಥಿಗೆ ಸಣ್ಣ ಪ್ರಮಾಣದ ಗಾಯವಾಗಿದೆ.
ಸಾರಿಗೆ ಇಲಾಖೆಯ ಗಂಗಾವತಿ ಘಟಕದ ವ್ಯವಸ್ಥಾಪಕ ರಾಜಶೇಖರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳಿಗೆ ಪರ್ಯಾಯ ವಾಹನದ ವ್ಯವಸ್ಥೆ ಮಾಡಿದ್ದಾರೆ.