ಕರ್ನಾಟಕ

karnataka

ETV Bharat / state

HSRP ಅವಧಿ ವಿಸ್ತರಣೆ: ಹೈಕೋರ್ಟ್​ಗೆ ಮಾಹಿತಿ ನೀಡಿದ ಸರ್ಕಾರ - HSRP

ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ.

By ETV Bharat Karnataka Team

Published : Jul 4, 2024, 10:58 PM IST

high-court
ಹೈಕೋರ್ಟ್ (ETV Bharat)

ಬೆಂಗಳೂರು:ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸೆಪ್ಟಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರ ಇಂದು ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.

ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ತಿಳಿಸಿದರು.

ಇದಕ್ಕೆ, ಈ ಕುರಿತ ಮಧ್ಯಂತರ ಆದೇಶದ ವಿಚಾರವಾಗಿ ನಮ್ಮ ವಾದ ಮಂಡಿಸಬೇಕಿದೆ ಎಂದು ಮೇಲ್ಮನವಿದಾರ ಕಂಪೆನಿಗಳ ಪರ ವಕೀಲರು ಕೋರಿದರು. ಅದಕ್ಕೆ, ಸರ್ಕಾರ ಅವಧಿಯನ್ನು ಸೆಪ್ಟಂಬರ್ 15ರವರೆಗೆ ವಿಸ್ತರಿಸಿದೆ. ಆದರೆ, ಮೇಲ್ಮನವಿದಾರರ ವಾದ ಆಲಿಸಬೇಕಿದೆ ಎಂದು ಹೇಳಿ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಿತು.

ಎಚ್‌ಎಸ್‌ಆರ್‌ಪಿ ಅಳವಡಿಕೆ ಅವಧಿಯನ್ನು ಆಗಸ್ಟ್ ಅಥವಾ ಸೆಪ್ಟಂಬರ್​ವರೆಗೆ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳುವುದಕ್ಕೂ ಸರ್ಕಾರ ಸಿದ್ಧವಿದೆ. ಆದರೆ, ಈ ವಿಚಾರದಲ್ಲಿ ಯಾವುದೇ ರೀತಿಯ ಬಲವಂತದ ಕ್ರಮ ಅಥವಾ ನಿರ್ಧಾರ ಕೈಗೊಳ್ಳಬಾರದು ಎಂದು ನ್ಯಾಯಾಲಯ ಮೇ 21ರಂದು ಮಧ್ಯಂತರ ಆದೇಶ ನೀಡಿದೆ.

ಹಾಗಾಗಿ ಯಾವುದೇ ನಿರ್ಧಾರ ಕೈಗೊಳ್ಳಲು ಆಗುತ್ತಿಲ್ಲ. ಒಂದು ವೇಳೆ ಮೇ 21ರ ಆದೇಶಕ್ಕೆ ಮಾರ್ಪಾಡು ಮಾಡಿದರೆ, ಆಗಸ್ಟ್-ಸೆಪ್ಟಂಬರ್​ವರೆಗೆ ಗಡುವು ವಿಸ್ತರಿಸುವ ಬಗ್ಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಸರ್ಕಾರ ಜೂನ್ 12 ರಂದು ಹೇಳಿತ್ತು.

ಇದನ್ನೂ ಓದಿ:ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ - Prajwal Revanna

For All Latest Updates

ABOUT THE AUTHOR

...view details