ಕರ್ನಾಟಕ

karnataka

ETV Bharat / state

ಸರ್ಕಾರಿ, ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸಲು ಆದೇಶ - EGG OR BANANA FOR STUDENTS

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸಲು ಸರ್ಕಾರ ಆದೇಶ ಮಾಡಿದೆ.

Government orders to provide only eggs or bananas to students of government and aided schools
ಸಂಗ್ರಹ ಚಿತ್ರ (ETV Bharat)

By ETV Bharat Karnataka Team

Published : Feb 17, 2025, 6:05 PM IST

ಬೆಂಗಳೂರು :ರಾಜ್ಯದಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಾಲಾ ಶಿಕ್ಷಣ ಇಲಾಖೆಯವರು ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಕುರಿತು ಪ್ರತ್ಯೇಕವಾದ ಮಾರ್ಗಸೂಚಿಯನ್ನು ಹೊರಡಿಸಲು ಸೂಚಿಸಲಾಗಿದೆ.

ಆದೇಶ ಪ್ರತಿ (ETV Bharat)
ಆದೇಶ ಪ್ರತಿ (ETV Bharat)

2023-24ನೇ ಸಾಲಿನ ಜುಲೈ ಬಜೆಟ್​​ನಲ್ಲಿ ಘೋಷಣೆ ಮಾಡಿರುವಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಪ್ರತಿ ವಿದ್ಯಾರ್ಥಿಯ ಒಂದು ದಿನದ ಘಟಕ ವೆಚ್ಚ 6 ರೂ.ನಂತೆ) 80 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ/ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಆದೇಶಿಸಲಾಗಿತ್ತು.

ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರದ ಹೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಬ್ಯಾಂಕ್ ಖಾತೆಗಳನ್ನು ತೆರೆಯಲು ಆದೇಶಿಸಲಾಗಿತ್ತು.

ಕಲಬುರಗಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಬರೆದ ಪತ್ರದಲ್ಲಿ, ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೇಂಗಾ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎನ್ನಬಹುದಾದಂತಹ ಅಪರ್ಯಾಪ್ತ ಕೊಬ್ಬಿನಾಂಶ ಹೆಚ್ಚಿಗೆ ಇದೆ. ಇದರಲ್ಲಿನ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಈ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸುವ ಕುರಿತು ಕ್ರಮ ವಹಿಸಬೇಕು ಎಂದು ಕೋರಿದ್ದರು.

ಇದನ್ನೂ ಓದಿ:ಮಾರ್ಚ್​​ 7ರಂದು 2025-26ನೇ ಸಾಲಿನ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ

ABOUT THE AUTHOR

...view details