ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿದ್ದಾರೆ.
ಆರ್ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಪೂರ್ವಾನುಮತಿ ನೀಡಿ ರಾಜ್ಯಪಾಲ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ರಾಜ್ಯಪಾಲರ ಆದೇಶ ಪ್ರತಿ (ETV Bharat) ಇದೇ ವೇಳೆ ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುವಂತೆ ಟಿ.ಜೆ.ಅಬ್ರಹಾಂ ಹಾಗೂ ಸ್ನೇಹಮಯಿ ಕೃಷ್ಣಾಗೆ ರಾಜಭವನದಿಂದ ಬುಲಾವ್ ನೀಡಲಾಗಿದೆ.
ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಜುಲೈ 26ರಂದು ಟಿ.ಜೆ. ಅಬ್ರಹಾಂ ಅವರು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದರು.
ಇದನ್ನೂ ಓದಿ:ಮುಡಾ: ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ತನಿಖೆಗೆ ಆದೇಶಿಸದಂತೆ ಕೋರಿದ್ದ ಅರ್ಜಿ ವಜಾ - MUDA Petition Dismissed