ಕರ್ನಾಟಕ

karnataka

ETV Bharat / state

ರಾಜ್ಯಪಾಲರಿಗೆ ಕಾಂಗ್ರೆಸ್​ನಿಂದ ಅವಮಾನ, ಗುರುವಾರ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಸುನೀಲ್‍ ಕುಮಾರ್ - BJP Protest - BJP PROTEST

ರಾಜ್ಯಪಾಲರಿಗೆ ಕಾಂಗ್ರೆಸ್​ನಿಂದ ಅವಮಾನ ಮಾಡಿದೆ ಎಂದು ಬಿಜೆಪಿ ಗುರುವಾರ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಕೈಗೊಳ್ಳಲು ನಿರ್ಧರಿಸಿದೆ.

GOVERNOR INSULTED BY CONGRESS  BJP PROTESTS IN ALL DISTRICTS  MUDA SCAM  BENGALURU
ಸುನೀಲ್‍ ಕುಮಾರ್ (ETV Bharat)

By ETV Bharat Karnataka Team

Published : Aug 21, 2024, 1:42 PM IST

ಬೆಂಗಳೂರು:ರಾಜ್ಯಪಾರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಗುರುವಾರ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ನೀಡಿರುವ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಬಿಜೆಪಿ ಕಾರ್ಯಕರ್ತರ ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಅಲ್ಲದೆ, ಕೆಲವೆಡೆ ಭಾವಚಿತ್ರವನ್ನು ದಹಿಸಲಾಗಿದೆ. ಇದಲ್ಲದೆ ಸಚಿವರಾದ ಜಮೀರ್ ಅಹ್ಮದ್, ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಮಾತನಾಡಿದ್ದಾರೆ. ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸ್ಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

ಓದಿ:ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ಗೆ ಶಾಸಕ ಟಿ.ಎಸ್. ಶ್ರೀವತ್ಸ ವಕೀಲರಿಂದ ನೋಟಿಸ್‌: 7 ದಿನಗಳ ಒಳಗೆ ಕ್ಷಮೆ ಯಾಚಿಸುವಂತೆ ಎಚ್ಚರಿಕೆ - Notice to M Lakshman

ABOUT THE AUTHOR

...view details