ಕರ್ನಾಟಕ

karnataka

ETV Bharat / state

ರಾಜ್ಯಪಾಲರು ರಾಷ್ಟ್ರಪತಿಯ ಪ್ರತಿನಿಧಿಯಾಗಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಲ್ಲ: ಸಿಎಂ - CM Siddaramaiah - CM SIDDARAMAIAH

ರಾಜ್ಯಪಾಲರು ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೇ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

chief-minister-siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Aug 20, 2024, 9:42 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ (ETV Bharat)

ಬೆಂಗಳೂರು: ತನ್ನ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದಾರೆ. ರಾಜ್ಯಪಾಲರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೇ ಹೊರತು, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡುವಂತೆ ಲೋಕಾಯುಕ್ತದವರು ಮನವಿ ಮಾಡಿರುವ ಕುರಿತ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್​ನಲ್ಲಿ ನಡೆದ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಲೋಕಾಯುಕ್ತದವರು 23-11-2023ರಂದು ಅನುಮತಿ ಕೋರಿದ್ದು, ರಾಜ್ಯಪಾಲರು ಯಾವುದೇ ನಿರ್ಣಯ ಕೈಗೊಳ್ಳದ ಕಾರಣ ಲೋಕಾಯುಕ್ತದವರು ಮತ್ತೊಮ್ಮೆ ಕೋರಿದ್ದಾರೆ. ಆದರೆ 26-07-2024 ರಂದು ಅಬ್ರಾಹಂ ಅವರು ತನ್ನ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಕೋರಿದ ತಕ್ಷಣ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದು, ಇಂತಹ ತಾರತಮ್ಯವೇಕೆ ಎಂದು ಪ್ರಶ್ನಿಸಿದರು.

ರಾಜ್ಯಪಾಲರನ್ನು ಮೂದಲಿಸಲಾಗಿದೆ ಎಂದು ಬಿಜೆಪಿಯವರು ಕಾಂಗ್ರೆಸ್​ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಶ್ರೀಮತಿ ಶಶಿಕಲಾ ಜೊಲ್ಲೆ, ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿಯವರ ಮೇಲೆ ಆರೋಪಗಳಿದ್ದು, ಇದುವರೆಗೆ ತನಿಖೆಗೆ ಆದೇಶಿಸಿಲ್ಲ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾಗಿದ್ದು, ಅವರ ಮೇಲೆ ಗೌರವವಿದೆ. ಆದರೆ ತಾರತಮ್ಯ ಧೋರಣೆ ಅನುಸರಿಸಬಾರದು ಎಂದರು.

ಇದನ್ನೂ ಓದಿ:ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆ: ಸಿದ್ದರಾಮಯ್ಯ - CM Siddaramaiah

ABOUT THE AUTHOR

...view details