ಬೆಂಗಳೂರು :ಮುಡಾ ಹಗರಣ ಸಂಬಂಧ ರಾಜಭವನ ಹಾಗೂ ರಾಜ್ಯ ಸರ್ಕಾರದ ನಡುವೆ ಕೆಲ ದಿನಗಳಿಂದ ತಿಕ್ಕಾಟ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದರ ನಡುವೆ ಇಂದು ಖಾಸಗಿ ಹೋಟೆಲ್ನಲ್ಲಿ ರಾಜ್ಯಪಾಲರು ಹಾಗೂ ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಮುಖಾಮುಖಿಯಾಗಿದ್ದು, ಒಂದೇ ಕಡೆ ಕುಳಿತು ಊಟ ಮಾಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಬಿಜೆಪಿ ಶಾಸಕ ಎಸ್. ಆರ್ ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಡಿಸಿಎಂ ಡಿ. ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಭಾಗವಹಿಸಿದ್ದರು. ಈ ವೇಳೆ ಸಚಿವ ಡಾ. ಎಂ. ಸಿ ಸುಧಾಕರ್, ಶಾಸಕ ಶರತ್ ಬಚ್ಚೇಗೌಡ ಸಹ ಉಪಸ್ಥಿತರಿದ್ದರು.