ಬೆಂಗಳೂರು:ಬಿಜೆಪಿ ಅವಧಿಯ ಅಕ್ರಮ ಆರೋಪಗಳ ತನಿಖೆಗೆ ವೇಗ ನೀಡಲು ಸಿಎಂ ಸಿದ್ದರಾಮಯ್ಯ ಐವರು ಸಚಿವರ ಸಮಿತಿ ರಚಿಸಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದ ಈ ಸಮಿತಿಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಸಂತೋಷ್ ಲಾಡ್ ಇದ್ದಾರೆ.
ಸರ್ಕಾರದ ಹಾಗೂ ತನಿಖಾ ಸಂಸ್ಥೆಗಳ ಹಂತದಲ್ಲಿರುವ ವಿವಿಧ ಹಗರಣಗಳ ತನಿಖಾ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಈ ಸಮಿತಿ ಕ್ರಮವಹಿಸಲಿದೆ. ಮುಂದಿನ ಎರಡು ತಿಂಗಳಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.