ಕರ್ನಾಟಕ

karnataka

ETV Bharat / state

ಸರ್ಕಾರಿ ವಕೀಲರ ನೇಮಕಾತಿ: ಎಸ್​ಸಿ/ಎಸ್​ಟಿ ವಕೀಲರಿಗೆ ಕನಿಷ್ಠ ಶೇ.24 ರಷ್ಟು ಮೀಸಲಾತಿ ಕಲ್ಪಿಸಿ ಆದೇಶ

ಸರ್ಕಾರಿ ವಕೀಲರನ್ನು ನೇಮಿಸುವಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಕೀಲರಿಗೆ ಶೇ.24 ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಸರ್ಕಾರಿ ವಕೀಲರ ನೇಮಕಾತಿ ಮೀಸಲಾತಿ Reservation for SC ST Advocate appointment
ಸರ್ಕಾರಿ ವಕೀಲರ ನೇಮಕಾತಿ (ETV Bharat)

By ETV Bharat Karnataka Team

Published : 5 hours ago

ಬೆಂಗಳೂರು: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ ಶೇ.24 ರಷ್ಟು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಕೀಲರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಎಸ್​ಸಿ/ಎಸ್​ಟಿ ಸಮುದಾಯದವರಿಗೆ ಶೇ.24ರಷ್ಟು ಮೀಸಲಾತಿ ಸಿಗಲಿದೆ.

'ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ ಶೇ.24 ರಷ್ಟು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸಿಕೊಳ್ಳಲು ಕಾನೂನು ಇಲಾಖೆಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದ್ದು, ಸಭಾ ನಡಾವಳಿಯಲ್ಲಿ ಕ್ರಮ ವಹಿಸಲು ನಿರ್ದೇಶನವಿರುತ್ತದೆ.

ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಮಿಸಲಾತಿ (ETV Bharat)

2022ರ ಅಕ್ಟೋಬರ್ 23ರಲ್ಲಿ ಆದೇಶಿಸಿದಂತೆ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಅನುಸೂಚಿತ ಜಾತಿಗಳಿಗೆ ಶೇಕಡ 17ರಷ್ಟು ಮತ್ತು ಅನುಸೂಚಿತ ಪಂಗಡಗಳಿಗೆ ಶೇಕಡ 7ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ. ಆ ಕಾರಣದಿಂದ ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅಧ್ಯಾದೇಶದಲ್ಲಿ ಹೇಳಿರುವಂತೆ ಒಟ್ಟು ಶೇ. 24ರಷ್ಟು ಮೀಸಲಾತಿಯನ್ನು ಕಲ್ಪಿಸಬಹುದಾಗಿದೆ ಎಂದು ಅಭಿಪ್ರಾಯ ನೀಡಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಪರಿಶಿಷ್ಟ ಜಾತಿ ವಕೀಲರಿಗೆ ಶೇ.17 ಮತ್ತು ಪರಿಶಿಷ್ಟ ಪಂಗಡಗಳ ವಕೀಲರಿಗೆ ಶೇ.7 ಸೇರಿ ಒಟ್ಟು ಶೇ.24 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶಿಸಿದೆ.

ಇದನ್ನೂ ಓದಿ: ಉಡುಪಿಯಲ್ಲಿದೆ ಉದ್ಯೋಗಾವಕಾಶ: ಎಂಎಸ್​ಡಬ್ಲ್ಯೂ ಪದವೀಧರರಿಗೆ ಸುವರ್ಣಾವಕಾಶ..ಅರ್ಹರು ಅಪ್ಲೈ ಮಾಡಿ!

ABOUT THE AUTHOR

...view details