ಬೆಂಗಳೂರು:ಹಿರಿಯ ಚಲನಚಿತ್ರ ನಟ, ನಿರ್ಮಾಪಕ ದ್ವಾರಕೀಶ್ ಅವರ ನಿಧನಕ್ಕೆ ರಾಜ್ಯ ಸರ್ಕಾರ ಸಂತಾಪ ವ್ಯಕ್ತಪಡಿಸಿದೆ. ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪುತ್ರ ಯೋಗೀಶ್ ಅವರ ನಿವಾಸದಲ್ಲಿ ನಿನ್ನೆ ದ್ವಾರಕೀಶ್ ನಿಧನರಾದರು. ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ದ್ವಾರಕೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಅಂತಿಮ ದರ್ಶನ ಮುಗಿದ ನಂತರ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ.