ಬೆಂಗಳೂರು:ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಶಾಲೆ ಹಾಗೂ ಕಾಲೇಜುಗಳ ಕಟ್ಟಡ, ಕೊಠಡಿ ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಯೋಜನೆಗೆ ಅನುಮೋದನೆ ನೀಡಿದೆ.
ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಇತ್ತೀಚೆಗೆ ದೆಹಲಿಗೆ ತೆರಳಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಸಲ್ಲಿಸಿದ್ದ ಪ್ರಸ್ತಾವನೆ ಸಂಬಂಧ 284 ಕೋಟಿ ರೂ. ಯೋಜನೆಗೆ ಒಪ್ಪಿಗೆ ನೀಡಲಾಗಿದೆ.