ಉಡುಪಿ:ಮದುಮಗ ಓಡಿ ಹೋದ ಕಾರಣ ಸೋಮವಾರ (ಆ. 19) ನಡೆಯಬೇಕಿದ್ದ ಮದುವೆ ರದ್ದಾಗಿದೆ. ಅಳಿವೆಕೋಡಿ ಗ್ರಾಮದ ಯುವಕನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಬೇಕಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ಕೆಲಸದಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಆ.18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು.
ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಅಂಗಡಿಯವರಿಗೆ 20 ಸಾವಿರ ರೂ. ಕೊಡಲು ಬಾಕಿ ಇತ್ತು. ಚಿನ್ನಾಭರಣಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಇದೆ ಎಂದು ಮನೆಯವರಲ್ಲಿ ಹೇಳಿ, ಮೊಬೈಲ್ ಮತ್ತು ಕೈಯಲ್ಲಿದ್ದ ಚಿನ್ನದ ಬ್ರಾಸ್‌ಲೇಟ್ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ.