ಕರ್ನಾಟಕ

karnataka

ETV Bharat / state

ಕರಿಮೆಣಸಿನ ಮೇಲೆ ವಿಧಿಸಲಾಗುತ್ತಿದ್ದ ಜಿಎಸ್​ಟಿ ರದ್ದು: ಸಂಸದ ಯದುವೀರ್‌ ಸಂತಸ - GST ON BLACK PEPPER ABOLISHED

ಕರಿಮೆಣಸಿನ ಮೇಲೆ ವಿಧಿಸಲಾಗುತ್ತಿದ್ದ ಜಿಎಸ್​ಟಿ ದರ ರದ್ದುಪಡಿಸುವಂತೆ ಸಲ್ಲಿಸಲಾಗಿದ್ದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ.

YADUVEER APPEAL ON BLACK PEPPER GST
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿದ್ದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ (ETV Bharat)

By ETV Bharat Karnataka Team

Published : Feb 25, 2025, 8:11 PM IST

ಮೈಸೂರು: ಕೊಡಗು ಜಿಲ್ಲೆಯ ಕರಿಮೆಣಸು ಬೆಳೆಗಾರರ ಸಂಕಷ್ಟ ನಿವಾರಿಸುವಲ್ಲಿ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಯಶಸ್ವಿಯಾಗಿದ್ದಾರೆ.

ಕೊಡಗಿನಲ್ಲಿ ಹೆಚ್ಚಾಗಿ ಕರಿಮೆಣಸು ಬೆಳೆಯಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಇದರ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ವಿಧಿಸುತ್ತಿತ್ತು. ಇದರಿಂದ ಬೆಳೆಗಾರರಿಗೆ ತೊಂದರೆಯಾಗಿತ್ತು.

ಗೋಣಿಕೊಪ್ಪದ ಬೆಳೆಗಾರರೊಬ್ಬರಿಗೆ ಒಂದು ಕೋಟಿ ರೂಪಾಯಿ ಜಿಎಸ್​ಟಿ ಕಟ್ಟುವಂತೆಯೂ ನೋಟಿಸ್ ನೀಡಲಾಗಿತ್ತು. ಆದರೆ, ಕರ್ನಾಟಕ ಕಾಫಿ ಬೆಳೆಗಾರರ ಸಂಘ, ಕರ್ನಾಟಕ ಬೆಳೆಗಾರರ ಸಂಘ ಮತ್ತು ಕೊಡಗು ಪ್ಲಾಂಟರ್ಸ್ ಅಸೋಸಿಯೇಶನ್ ನಿಯೋಗ ಸಂಸದ ಯದುವೀರ್ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ಮನವರಿಕೆ ಮಾಡಿತ್ತು.

ಇದಕ್ಕೆ ಸ್ಪಂದಿಸಿದ್ದ ಸಂಸದರು, ಇತ್ತೀಚೆಗಷ್ಟೇ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಕರಿಮೆಣಸಿನ ಮೇಲೆ ವಿಧಿಸುತ್ತಿರುವ ಜಿಎಸ್​ಟಿ ದರ ರದ್ದುಪಡಿಸುವಂತೆ ಮನವಿ ಮಾಡಿದ್ದರು. ಈ ಮನವಿಗೆ ಕೇಂದ್ರ ಸಚಿವರು ಸ್ಪಂದಿಸಿದ್ದು, ಜಿಎಸ್​ಟಿ ಮಂಡಳಿಯ ಸಭೆಯಲ್ಲಿ ಕರಿಮೆಣಸಿನ ಮೇಲಿನ ಜಿಎಸ್​ಟಿ ದರವನ್ನು ರದ್ದುಪಡಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಲಾಗಿದೆ. ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಯದುವೀರ್‌, ಕೇಂದ್ರ ಸಚಿವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ಕೊಡಗು ಕರಿಮೆಣಸು ಬೆಳೆಗಾರರ ಸಂಕಷ್ಟವನ್ನು ನಿವಾರಿಸಿದ್ದಕ್ಕೆ ಧನ್ಯವಾದಗಳು. ಇದರಿಂದ ಕೊಡಗು ಮಾತ್ರವಲ್ಲದೇ ಇತರೆ ಕರಿಮೆಣಸು ಬೆಳೆಗಾರರಿಗೂ ಸಾಕಷ್ಟು ನೆರವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಕಡಲೆ ಬೆಳೆಗೆ ಕಡಿಮೆ ಬೆಂಬಲ ಬೆಲೆ ನಿಗದಿ, ಸರ್ಕಾರದ ಖರೀದಿ ಕೇಂದ್ರಗಳಿಗೆ ಮಾರಲು ರೈತರ ನಿರಾಸಕ್ತಿ - LOW MSP FOR CHICKPEA CROP

ABOUT THE AUTHOR

...view details