ಹಾಸನ:ಅತಿಥಿ ಉಪನ್ಯಾಸಕಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪಾ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿ.
ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿಯಾಗಿರುವ ದೀಪಾ, ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದರು. ಗುರುವಾರ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿವಾಹಿತೆಯಾಗಿದ್ದ ದೀಪಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಾಳಿ ಬದುಕಬೇಕಾಗಿದ್ದ ದೀಪ ಸಾವು ಕುಟುಂಬಕ್ಕೆ ಸಿಡಿಲು ಬಡಿದಂತಾಗಿದೆ.