ಕರ್ನಾಟಕ

karnataka

ದೆಹಲಿ ಕರ್ನಾಟಕ ಸಂಘಕ್ಕೆ ನೋಯ್ಡಾದಲ್ಲಿ ಜಾಗ, ನಾಡು-ನುಡಿ ವಿಚಾರದಲ್ಲಿ ರಾಜಿ ಇಲ್ಲ: ಹೆಚ್​ಡಿಕೆ - H D Kumaraswamy

By ETV Bharat Karnataka Team

Published : Aug 1, 2024, 10:19 PM IST

ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸಲು ಕ್ರಮ ವಹಿಸುವುದಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

MPS FELICITATION PROGRAM
ಅಭಿನಂದನಾ ಕಾರ್ಯಕ್ರಮ (ETV Bharat)

ಬೆಂಗಳೂರು/ನವದೆಹಲಿ: ಉತ್ತರ ಪ್ರದೇಶದ ನೋಯ್ಡಾದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಜಾಗ ಕೊಡಿಸುವ ಬಗ್ಗೆ ಆ ರಾಜ್ಯದ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೊತೆ ಚರ್ಚೆ ಮಾಡಲಾಗುವುದು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ರಾಜ್ಯದ ಕೇಂದ್ರ ಸಚಿವರು, ಸಂಸದರಿಗೆ ದೆಹಲಿ ಕರ್ನಾಟಕ ಸಂಘ ಇಂದು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ನೋಯ್ಡಾದಲ್ಲಿ ಜಾಗ ಪಡೆಯುವ ಬಗ್ಗೆ ಸಂಘದ ವತಿಯಿಂದ ಪ್ರಯತ್ನಗಳು ನಡೆದಿವೆ. ಹೀಗಾಗಿ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಸಚಿವರು, ಸಂಸದರ ಜೊತೆ ಸೇರಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಮನವಿ ಮಾಡಲಾಗುವುದು ಎಂದು ಹೇಳಿದರು.

ಅಭಿನಂದನಾ ಕಾರ್ಯಕ್ರಮ (ETV Bharat)

ನಾವು ಎಲ್ಲಿಯೇ ಇದ್ದರೂ ಕನ್ನಡಿಗರಾಗಿ ಉಳಿಯಬೇಕು. ನಮ್ಮ ಭಾಷೆ, ಸಂಸ್ಕೃತಿ, ನಾಡು ನುಡಿಯನ್ನು ಬಿಟ್ಟು ಬದುಕಬಾರದು. ಈ ನಿಟ್ಟಿನಲ್ಲಿ ದೆಹಲಿ ಕನ್ನಡಿಗರ ಬದ್ಧತೆ, ಕನ್ನಡತನದ ಬಗ್ಗೆ ನನಗೆ ಸಂತಸವಿದೆ. ನಾಡು ನುಡಿ, ನೆಲ ಜಲದ ವಿಷಯ ಬಂದಾಗ ರಾಜಿ ಪ್ರಶ್ನೆ ಇಲ್ಲ. ಎಲ್ಲರೂ ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತೇವೆ ಎಂದ ಅವರು, ದೆಹಲಿ ಕರ್ನಾಟಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ.ಸೋಮಣ್ಣ ಹಾಗೂ ಸಂಸದರಾದ ಸಿ.ಎನ್.ಮಂಜುನಾಥ್, ಮಲ್ಲೇಶ್ ಬಾಬು, ಸುಧಾಕರ್, ಮಲ್ಲೇಶ್ ಬಾಬು, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ.ಮೋಹನ್, ಸಾಗರ ಖಂಡ್ರೆ, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ ಹಾಗೂ ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಢಗೆ ಅವರನ್ನು ಕರ್ನಾಟಕ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಅಭಿನಂದನಾ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ (ETV Bharat)

ಸಂಘದ ಅಧ್ಯಕ್ಷ ಸಿ.ಪಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಸೇರಿ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ - CM Siddaramaiah

ABOUT THE AUTHOR

...view details