ಕರ್ನಾಟಕ

karnataka

ETV Bharat / state

ಹೆಚ್​.ಡಿ ರೇವಣ್ಣ ಜಾಮೀನು ಅರ್ಜಿ; ಎಸ್‌ಐಟಿಗೆ ಕೋರ್ಟ್​ ನೋಟಿಸ್, ವಿಚಾರಣೆ ಮುಂದೂಡಿಕೆ - h d revanna case - H D REVANNA CASE

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯ ಸಂಬಂಧ ನ್ಯಾಯಾಲಯ ಎಸ್ಐಟಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿದೆ.

ಹೆಚ್​.ಡಿ ರೇವಣ್ಣ ಜಾಮೀನು ಅರ್ಜಿ
ಹೆಚ್​.ಡಿ ರೇವಣ್ಣ ಜಾಮೀನು ಅರ್ಜಿ (ETV Bharat)

By ETV Bharat Karnataka Team

Published : May 7, 2024, 3:46 PM IST

ಬೆಂಗಳೂರು:ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರ ಜಾಮೀನು ಅರ್ಜಿ ಸಂಬಂಧ ನ್ಯಾಯಾಲಯ ಎಸ್ಐಟಿಗೆ ನೋಟಿಸ್ ಜಾರಿ ಮಾಡಿದೆ. ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

ಅಲ್ಲದೆ, ಆರೋಪಿ ಪ್ರಸ್ತುತ ಎಸ್ಐಟಿ ವಶದಲ್ಲಿದ್ದಾರೆ. ಈ ಹಂತದಲ್ಲಿ ಜಾಮೀನು ಅರ್ಜಿ ವಿಚಾರಣೆ ಮಾಡಬಹುದೇ?. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ವಿಚಾರಣೆ ವೇಳೆ ರೇವಣ್ಣ ಪರ ಹಿರಿಯ ವಕೀಲ ಸಿ. ವಿ. ನಾಗೇಶ್ ವಾದ ಮಂಡಿಸಿ, ಈ ಪ್ರಕರಣದಲ್ಲಿ ಸುಖಾಸುಮ್ಮನೆ ತಮ್ಮ ಕಕ್ಷಿದಾರರನ್ನು ಸಿಲುಕಿಸಲಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು. ಇದಕ್ಕೆ ಮಧ್ಯಪ್ರವೇಶ ಮಾಡಿದ ನ್ಯಾಯಾಧೀಶರು, ಆರೋಪಿ ಪೊಲೀಸ್ ವಶದಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ಮಾಡಲು ಹೇಗೆ ಸಾಧ್ಯ?. ಒಂದು ವೇಳೆ‌ ಬೇಲ್ ನೀಡಿದರೆ ಪೊಲೀಸ್ ಕಸ್ಟಡಿಯನ್ನು ಹೇಗೆ ಮುಂದುವರಿಸಲು ಸಾಧ್ಯ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಿ. ವಿ. ನಾಗೇಶ್‌, ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೂ ಜಾಮೀನು ನೀಡಬಹುದು. ಈ ಬಗ್ಗೆ ಇರುವ ಕಾನೂನಿನ ಬಗ್ಗೆ ಹಾಗೂ ಸುಪ್ರೀಂ ಕೋರ್ಟ್‌ನ ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ನ್ಯಾಯಾಲಯದ ಗಮನಕ್ಕೆ ತಂದರು. ಈ ವೇಳೆ ಎಸ್‌ಐಟಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಎಸ್‌ಐಟಿಯ ವಿಶೇಷ ಅಭಿಯೋಜಕರಿಗೆ ನೋಟಿಸ್ ಜಾರಿ ಮಾಡಿದ್ದು, ಪೊಲೀಸ್ ಕಸ್ಟಡಿಯಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದೇ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದ್ದಾರೆ. ಹೀಗಾಗಿ ವಿಚಾರಣೆಯನ್ನು ನಾಳೆಗೆ(ಬುಧವಾರಕ್ಕೆ) ಮುಂದೂಡಲಾಯಿತು.

ಇದನ್ನೂ ಓದಿ:ಎಸ್ಐಟಿ ಅಲ್ಲ ಅದು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ರಬ್ಬರ್ ಸ್ಟ್ಯಾಂಪ್; ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವಹಿಸಿ : ಅಶೋಕ್ ಆಗ್ರಹ - R Ashok

For All Latest Updates

ABOUT THE AUTHOR

...view details