ಬೆಂಗಳೂರು:ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಸಂತ್ರಸ್ತೆಯ ಅಪಹರಣ ಆರೋಪದಡಿ ಬಂಧನಕ್ಕೊಳಗಾಗಿರುವ ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ.
ಎಸ್ಐಟಿ ವಶದಲ್ಲಿರುವ ರೇವಣ್ಣಗೆ ಹೊಟ್ಟೆ ನೋವು: ಆಸ್ಪತ್ರೆಯಲ್ಲಿ ಚಿಕಿತ್ಸೆ - Revanna suffering stomach pain - REVANNA SUFFERING STOMACH PAIN
ಸಂತ್ರಸ್ತೆಯ ಅಪಹರಣ ಆರೋಪದಡಿ ಬಂಧನಕ್ಕೊಳಗಾಗಿರುವ ಶಾಸಕ ಹೆಚ್.ಡಿ.ರೇವಣ್ಣ ಅವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಎಸ್ಐಟಿ ವಶದಲ್ಲಿರುವ ರೇವಣ್ಣಗೆ ಹೊಟ್ಟೆ ನೋವು (ETV Bharat)
Published : May 7, 2024, 9:38 PM IST
ಎಸ್ಐಟಿ ಕಸ್ಟಡಿಯಲ್ಲಿರುವ ರೇವಣ್ಣನವರಿಗೆ ಹೊಟ್ಟೆ ನೋವು ಉಲ್ಬಣಿಸಿದ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸ್ಕ್ಯಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಹಿನ್ನೆಲೆಯಲ್ಲಿ ವಿಕ್ಟೋರಿಯ ಆಸ್ಪತ್ರೆಗೆ ರೇವಣ್ಣರನ್ನು ಶಿಫ್ಟ್ ಮಾಡಲಾಗಿದ್ದು, ಇಂದು ವಿಕ್ಟೋರಿಯ ಆಸ್ಪತ್ರೆಯಲ್ಲಿಯೇ ಅಡ್ಮಿಟ್ ಮಾಡುವ ಸಾಧ್ಯತೆ ಇದೆ.