ಬೆಂಗಳೂರು:ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡಿದ್ದಲ್ಲದೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ಧ ಮಹಿಳೆಯೊಬ್ಬರು ಆರೋಪಿಸಿ ದೂರು ನೀಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ದೂರಿನ ವಿವರ:ಸಿನಿಮಾ ಶೂಟಿಂಗ್ ನೋಡಲು ತೆರಳಿದ್ದಾಗ ಪರಿಚಯವಾದ ಚರಿತ್ ಬಾಳಪ್ಪ, ನನ್ನೊಂದಿಗೆ ಪ್ರೀತಿಯ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದರು. ನನಗೆ ಕೈಕೊಟ್ಟು ಮತ್ತೊಬ್ಬಳ ಜೊತೆ ಮದುವೆ ಮಾಡಿಕೊಂಡು, ಬಳಿಕವೂ ನನ್ನೊಂದಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದರು. ಅಲ್ಲದೇ ಪತ್ನಿಯಿಂದ ವಿಚ್ಚೇದನ ಪಡೆದ ಬಳಿಕ ಪುನಃ ನನ್ನನ್ನು ಪ್ರೀತಿಸುವಂತೆ ಒತ್ತಾಯಿಸಿದ್ದರು. ಒಪ್ಪದಿದ್ದಾಗ ನಮ್ಮಿಬ್ಬರ ಖಾಸಗಿ ಫೋಟೋಗಳನ್ನು ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಹಣ ಸುಲಿಗೆ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.
ಮಹಿಳೆಯ ದೂರಿನನ್ವಯ ಚರಿತ್ ಬಾಳಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.