ಕರ್ನಾಟಕ

karnataka

ಕಳಪೆ ಪೂರಕ ಆಹಾರ ಪೂರೈಸಿದರೆ ಡಿಡಿ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾರ್ನಿಂಗ್​​ - POOR FOOD SUPPLY HEBBALKAR WARNING

By ETV Bharat Karnataka Team

Published : Jun 28, 2024, 9:41 AM IST

ಕಳಪೆ ಪೂರಕ ಆಹಾರ ಪೂರೈಸಿದರೆ ಡಿಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.

Harsh action against District Deputy Director if poor supplementary food is supplied: Lakshmi Hebbalkar warns
ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳನ್ನು ಪೂರೈಕೆ ಮಾಡಿದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು.

ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್​​ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು. ಅಂಗನವಾಡಿ ಮಕ್ಕಳು ಸ್ವಂತ ಮಕ್ಕಳು ಎಂದು ತಿಳಿದು ಉತ್ತಮ ಗುಣಮಟ್ಟದ ಪೂರಕ ಆಹಾರಗಳನ್ನು ಒದಗಿಸಬೇಕು. ಕಳಪೆ ಆಹಾರಗಳ ಪೂರೈಕೆಯನ್ನು ಯಾವುದೇ ಕಾರಣದಿಂದ ಸಹಿಸಲು ಸಾಧ್ಯವಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.

ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

ಸ್ಥಳೀಯ ಮಟ್ಟದಲ್ಲಿ ತಪ್ಪುಗಳಾದರೆ ಅದು ಮೇಲ್ಮಟ್ಟದವರೆಗೆ ಎಲ್ಲರಿಗೂ ಕೆಟ್ಟ ಹೆಸರು ತರುತ್ತದೆ. ಅಲ್ಲದೇ ಮಕ್ಕಳ ಹಾಗೂ ಮಹಿಳೆಯರ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಹಾಗಾಗಿ ಗುಣಮಟ್ಟಕ್ಕೆ ಅತೀ ಹೆಚ್ಚು ಆದ್ಯತೆ ನೀಡಬೇಕು. ಘಟಕದ ಪ್ರತಿಯೊಂದು ಉತ್ಪನ್ನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದರು. ಯಾವುದಾದರೂ ಕಳಪೆ ಎಂದು ಕಂಡು ಬಂದರೆ ಘಟಕದವರೇ ತಿರಸ್ಕರಿಸಬೇಕು. ಎಲ್ಲ ಉತ್ಪನ್ನಗಳನ್ನು ಸ್ವಚ್ಛಗೊಳಿಸಿ ಪೂರೈಸಬೇಕು. ಈ ವಿಷಯದಲ್ಲಿ ತಪ್ಪಾದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅಂಗನವಾಡಿ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಭಾಗಗಳನ್ನು ಸಂಪೂರ್ಣ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಎಂಎಸ್​ಪಿಸಿ ಘಟಕಗಳ ಸುಧಾರಣೆಗೂ ಕ್ರಮ ಕೈಗೊಳ್ಳಲಾಗಿದೆ. - ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ

ಈ ವೇಳೆ ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜ ಸೇರಿದಂತೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಇದನ್ನೂ ಓದಿ:ಜಲಸಿರಿ ಯೋಜನೆ: ನೀರು ಬೇಕಾಬಿಟ್ಟಿ ವ್ಯರ್ಥ ಮಾಡ್ತಿದ್ರೆ ಈಗಲೇ ಎಚ್ಚೆತ್ತುಕೊಳ್ಳಿ, ನಿಮ್ಮ ಮನೆಗೆ ಬರಲಿದೆ ಭಾರಿ ಬಿಲ್! - Jalasiri Project

ABOUT THE AUTHOR

...view details