ಕರ್ನಾಟಕ

karnataka

ETV Bharat / state

ಹಸೆ ಚಿತ್ತಾರ ಕಲಾವಿದ ಚಂದ್ರಶೇಖರ್‌ಗೆ ರಾಜ್ಯೋತ್ಸವ ಪ್ರಶಸ್ತಿ - RAJYOTSAVA AWARD

ಹಸೆ ಚಿತ್ತಾರ ಕಲಾವಿದ ಚಂದ್ರಶೇಖರ್‌ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಹಸೆ ಚಿತ್ತಾರ ಕಲಾವಿದ ಚಂದ್ರಶೇಖರ್‌
ಹಸೆ ಚಿತ್ತಾರ ಕಲಾವಿದ ಚಂದ್ರಶೇಖರ್‌ (ETV Bharat)

By ETV Bharat Karnataka Team

Published : Oct 30, 2024, 10:16 PM IST

ಶಿವಮೊಗ್ಗ: ಹಸೆ ಚಿತ್ತಾರ ಕಲಾವಿದ ಸಾಗರ ತಾಲೂಕಿನ ಸಿರಿವಂತೆ ಗ್ರಾಮದ ಚಂದ್ರಶೇಖರ್‌ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.

ಚಂದ್ರಶೇಖರ್‌ ಕಳೆದ 25 ವರ್ಷಗಳಿಂದ ಹಸೆ ಚಿತ್ತಾರ ಕಲೆಯನ್ನು ಪ್ರಚುರಪಡಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಈ ಬಾರಿ ಕರಕುಶಲ ವಿಭಾಗದಲ್ಲಿ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ. ನವೆಂಬರ್ 1ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಕುರಿತು ಚಂದ್ರಶೇಖರ್ 'ಈಟಿವಿ ಭಾರತ' ಜೊತೆ ಮಾತನಾಡಿ, "ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ತುಂಬಾ ಸಂತಸವಾಗುತ್ತಿದೆ. ನಾನು ಪ್ರಶಸ್ತಿಗೆ ಅರ್ಜಿ ಹಾಕದೇ ಇದ್ದರೂ ನನ್ನ ಸೇವೆ ಗುರುತಿಸಿ ರಾಜ್ಯ ಸರ್ಕಾರ ಪ್ರಶಸ್ತಿ ಘೋಷಿಸಿದೆ. ಕಳೆದ 25 ವರ್ಷಗಳಿಂದ ಹಸೆ ಚಿತ್ತಾರ ಕಲೆಯನ್ನು ಉಳಿಸಿ, ಬೆಳೆಸುವ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ" ಎಂದು ಹೇಳಿದರು.

ಇದನ್ನೂ ಓದಿ:ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ABOUT THE AUTHOR

...view details