ಹಾಸನ: ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದರ ನಿವಾಸದಲ್ಲಿ ಎಫ್ಎಸ್ಎಲ್ ತಜ್ಞರ ಪರಿಶೀಲನೆ ಪೂರ್ಣಗೊಂಡಿದೆ. ನಂತರ ಎಸ್ಐಟಿ ಅಧಿಕಾರಿಗಳನ್ನೊಳಗೊಂಡ ಎಫ್ ಎಸ್ ಎಲ್ ತಜ್ಞರ ತಂಡ ಹೊಳೆನರಸೀಪುರದ ರೇವಣ್ಣ ನಿವಾಸದತ್ತ ತೆರಳಿತು.
ಎಫ್ಎಸ್ಎಲ್ ತಂಡ ಪರಿಶೀಲನೆ:ಸಂಸದ ಪ್ರಜ್ವಲ್ ನಿವಾಸದಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿದ ಇನ್ಸ್ಪೆಕ್ಟರ್ ಸ್ವರ್ಣ ನೇತೃತ್ವದ ತಂಡ, ಮೇ 4 ರಂದು ಸಂತ್ರಸ್ತ ಮಹಿಳೆಯ ಜೊತೆಗೆ ಬಂದು ಮಹಜರ್ ನಡೆಸಿತ್ತು. ಆರ್.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿತ್ತು ಎಂದು ಸಂತ್ರಸ್ತೆ ದೂರು ನೀಡಿದ್ದ ಹಿನ್ನೆಲೆ ಮನೆಯನ್ನು ಎಸ್ಐಟಿ ವಶಕ್ಕೆ ಪಡೆದಿತ್ತು. ಇಂದು ಎಫ್ಎಸ್ಎಲ್ ತಂಡ ಅತ್ಯಾಚಾರ ಆರೋಪ ಕುರಿತು ಹಲವು ಸಾಕ್ಷ್ಯ ಸಂಗ್ರಹಿಸಿದೆ.