ಹಾಸನ:ಹಾಸನ ಜೆಡಿಎಸ್ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ಡ್ರೈವ್ ಹಂಚಿಕೆ ಆರೋಪದ ಮೇಲೆ ಮಂಗಳವಾರ ಬೆಂಗಳೂರಿನಲ್ಲಿ ಇಬ್ಬರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಬಂಧಿಸಿತ್ತು. ಈ ಇಬ್ಬರು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ಗೌಡ ಎಂಬವರನ್ನು ಮೂರು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಎಸ್ಐಟಿ ಪೊಲೀಸರು ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಆರೋಪಿಗಳನ್ನು ಹಾಸನದ 2ನೇ ಅಧಿಕ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್, 3 ದಿನಗಳ ಕಾಲ (ಜೂನ್ 1ರವರೆಗೆ) ಆರೋಪಿಗಳನ್ನು ಕಸ್ಟಡಿಗೆ ಒಪ್ಪಿಸಿತು.