ಕರ್ನಾಟಕ

karnataka

ETV Bharat / state

ಹಾವೇರಿ ಲೋಕಸಭಾ ಕ್ಷೇತ್ರ: ಬಸವರಾಜ ಬೊಮ್ಮಾಯಿಗೆ ಪ್ರಯಾಸದ ಗೆಲುವು - Lok Sabha Election Results 2024 - LOK SABHA ELECTION RESULTS 2024

ಹಾವೇರಿಯಲ್ಲಿ ಮತ ಎಣಿಕೆ ಕಾರ್ಯ ಮುಗಿದಿದ್ದು, ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಸೋಲು ಅನುಭವಿಸಿದ್ದಾರೆ.

HAVERI LOK SABHA CONSTITUENCY  GENERAL ELECTION  HAVERI
ಹಾವೇರಿಯಲ್ಲಿ ಮತ ಎಣಿಕೆ ಕಾರ್ಯ ಆರಂಭ (ಕೃಪೆ: ETV Bharat Karnataka)

By ETV Bharat Karnataka Team

Published : Jun 4, 2024, 8:11 AM IST

Updated : Jun 4, 2024, 5:01 PM IST

ಹಾವೇರಿ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಬಸವರಾಜ ಬೊಮ್ಮಾಯಿ ಮಾತು (ETV Bharat)

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಜಯಭೇರಿ ಬಾರಿಸಿರುವ ಬೊಮ್ಮಾಯಿ, ಇದೇ ಮೊದಲ ಬಾರಿಗೆ ಲೋಕಸಭೆಗೆ ಸ್ಪರ್ಧಿಸಿ ವಿಜಯ ಪತಾಕೆ ಹಾರಿಸಿದ್ದಾರೆ. ಇವರಿಗೆ ಎದುರಾಳಿಯಾಗಿ ಅಖಾಡಕ್ಕೆ ಇಳಿದಿದ್ದ ಕಾಂಗ್ರೆಸ್ ಪಕ್ಷದಿಂದ ಆನಂದಸ್ವಾಮಿ ಗಡ್ಡದೇವರಮಠ ಸೋಲು ಅನುಭವಿಸಿದ್ದಾರೆ.

ಬಿಜೆಪಿ ಭದ್ರಕೋಟೆ:2008ರಲ್ಲಿ ನಡೆದ ಕ್ಷೇತ್ರ ಮರುವಿಂಗಡಣೆಯ ಪ್ರಕ್ರಿಯೆಯ ಫಲವಾಗಿ ಸೃಷ್ಟಿಯಾದ ಹೊಸ ಕ್ಷೇತ್ರ. ಅದರ ಮರುವರ್ಷವೇ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಮೊದಲು ಜಯ ಗಳಿಸಿದ್ದು ಶಿವಕುಮಾರ್ ಚನ್ನಬಸಪ್ಪ ಉದಾಸಿ. ಆಗಿನಿಂದಲೂ ಇದು ಬಿಜೆಪಿಯ ಭದ್ರಕೋಟೆಯೇ ಆಗಿದೆ. 2014ರಲ್ಲಿ ಹಾಗೂ 2019ರ ಚುನಾವಣೆಗಳಲ್ಲಿ ಪುನಃ ಉದಾಸಿಯವರೇ ಗೆದ್ದು ಬಂದಿದ್ದರು. ಈ ಬಾರಿ ಬಿಜೆಪಿಯು ಈ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿತ್ತು.

ಮತದಾನ: ಈ ಕ್ಷೇತ್ರದ ಮತದಾರರು ಮತದಾನಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. 2019ರಲ್ಲಿ ಶೇ. 74.01ರಷ್ಟು ಮತದಾನ ಆಗಿತ್ತು. 2024ರಲ್ಲಿ ಅದಕ್ಕಿಂತಲೂ ಹೆಚ್ಚು ಮತದಾನ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಅದರಂತೆ ಇಲ್ಲಿ ಶೇ. 76.78. ಮತದಾನ ದಾಖಲಾಗಿತ್ತು.

ಓದಿ:ಲೋಕಸಮರ: ಯಾರಿಂದ ಯಾರಿಗೆ ಹೊಡೆತ? ರಾಜ್ಯದ 28 ಕ್ಷೇತ್ರಗಳ ಮಾಹಿತಿ - Lok Sabha Election

Last Updated : Jun 4, 2024, 5:01 PM IST

ABOUT THE AUTHOR

...view details