ಹಾವೇರಿ:ವಿವಾಹಿತ ಮಹಿಳೆಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಘಟನೆ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಇರ್ಫಾನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ವಿವಾಹಿತ ಮಹಿಳೆಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಆರೋಪ: ಆರೋಪಿ ಪೊಲೀಸ್ ವಶಕ್ಕೆ - Blackmailing Over Obscene Video
ಹಾವೇರಿ ಜಿಲ್ಲೆಯಲ್ಲಿ ವಿವಾಹಿತ ಮಹಿಳೆಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಆರೋಪಿಯೋರ್ವ ಬ್ಲಾಕ್ ಮೇಲ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
Published : May 18, 2024, 10:57 PM IST
ಆರೋಪಿಯು ಅಶ್ಲೀಲ ವಿಡಿಯೋ ಇಟ್ಟುಕೊಂಡು ನಿರಂತರ ಬ್ಲಾಕ್ ಮೇಲ್ ಮಾಡುತ್ತಿದ್ದ. ಇತ್ತೀಚಿಗೆ ಕೂಡ ಮನೆಗೆ ಹೋಗಿ ಮತ್ತೆ ಕಿರುಕುಳ ನೀಡಿದ್ದ. ತನ್ನೊಂದಿಗೆ ಸಹಕರಿಸಬೇಕು ಇಲ್ಲವಾದರೆ, ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಕೂಡ ಹಾಕಿದ್ದ. ಈ ವೇಳೆ, ಸ್ಥಳೀಯರ ಸಹಾಯದಿಂದ ಮಹಿಳೆ ರಕ್ಷಣೆಗೆ ಪಡೆದು ತಡಸ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.
ಇದನ್ನೂ ಓದಿ:ಬೆಳಗಾವಿ ಜಿಲ್ಲೆಯಲ್ಲಿ ಒಂದೂವರೇ ತಿಂಗಳಲ್ಲಿ 10 ಬಾಲ್ಯ ವಿವಾಹ, ಎಷ್ಟೇ ಜಾಗೃತಿ ಮೂಡಿಸಿದರೂ ಕ್ಯಾರೇ ಎನ್ನದ ಪೋಷಕರು