ಕರ್ನಾಟಕ

karnataka

ETV Bharat / state

ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ: ಸಿದ್ದರಾಮಯ್ಯಗೆ ಹೆಚ್​​​ಡಿಕೆ ತಿರುಗೇಟು - MUDA SCAM - MUDA SCAM

ಮುಡಾ ಸೈಟ್ ಹಂಚಿಕೆ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ, ಹೆಚ್​​​ಡಿಕೆ
ಸಿದ್ದರಾಮಯ್ಯ, ಹೆಚ್​​​ಡಿಕೆ (ETV Bharat)

By ETV Bharat Karnataka Team

Published : Jul 30, 2024, 5:48 PM IST

ಬೆಂಗಳೂರು:ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

'ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ' ಎಂದು ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮುಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ 'ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?' 'ಸುಳ್ಳು ಸಂಶೋಧಕ ಸಿದ್ದರಾಮಯ್ಯ'ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

'ಮುಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ' ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ. ನಿಮ್ಮ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ.. ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯತೆ ನನಗೆ ಅರ್ಥವಾಗುತ್ತದೆ. ಪಾಪ.. ನಿಮ್ಮ ಪಕ್ಷದವರೇ ನಿಮಗೆ 'ಶರಪಂಜರ' ಸೃಷ್ಟಿಸುತ್ತಿದ್ದಾರೆ ಎಂದು ಹೆಚ್​ಡಿಕೆ ಲೇವಡಿ ಮಾಡಿದ್ದಾರೆ.

ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದೇ ನಾಲಿಗೆ ಮೇಲೆ ಸಹಕಾರ, ಅಸಹಕಾರ.. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ?. ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ.. ನಿಮ್ಮ ಐಡಿಯಾಲಜಿ! ಆ Siddalogy ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ.. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳು ಬಗ್ಗೆ ನನಗೆ ಚೆನ್ನಾಗಿಯೇ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಅನುಸೂಚಿತ ಜಾತಿ, ಪಂಗಡಗಳ ಕಲ್ಯಾಣ ಸಮಿತಿ ಕೃಷಿ ಇಲಾಖೆಗೆ ಮಾಡಿರುವ ಶಿಫಾರಸುಗಳು ಹೀಗಿವೆ.. - Welfare Committee Recommendations

ABOUT THE AUTHOR

...view details