ಕರ್ನಾಟಕ

karnataka

ETV Bharat / state

ಬೆಂಗಳೂರು: ಡೆತ್​​ನೋಟ್​ ಬರೆದಿಟ್ಟು ಹೆಡ್ ಕಾನ್ಸ್​ಟೇಬಲ್​ ಆತ್ಮಹತ್ಯೆ - HEAD CONSTABLE DEATH

ಪೊಲೀಸ್ ಹೆಡ್ ಕಾನ್ಸ್​ಟೇಬಲ್​ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

HEAD CONSTABLE DEATH
ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್​ಟೇಬಲ್ ತಿಪ್ಪಣ್ಣ (ETV Bharat)

By ETV Bharat Karnataka Team

Published : Dec 14, 2024, 1:19 PM IST

Updated : Dec 14, 2024, 7:12 PM IST

ಬೆಂಗಳೂರು:ನಗರದಲ್ಲಿ ಪೊಲೀಸ್ ಹೆಡ್ ಕಾನ್ಸ್​ಟೇಬಲ್​ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತಿಪ್ಪಣ್ಣ (33) ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್​ಟೇಬಲ್.

ಹುಳಿಮಾವು ಪೊಲೀಸ್​ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಿಪ್ಪಣ್ಣ ಮೂಲತಃ ವಿಜಯಪುರದವರಾಗಿದ್ದು, ನಗರದ ನಾಗನಾಥಪುರದ ಕೃಷ್ಣಪ್ಪ ಗಾರ್ಡನ್​ನಲ್ಲಿ ವಾಸವಾಗಿದ್ದರು. ತನಗೆ ಹೆಂಡತಿ ಕಿರುಕುಳ ನೀಡುತ್ತಿದ್ದಾಳೆ ಹಾಗೂ ಮಾವನೂ (ಪತ್ನಿಯ ತಂದೆ) ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್​ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬೈಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕಾನ್ಸ್​ಟೇಬಲ್ ಆತ್ಮಹತ್ಯೆ ಕುರಿತಂತೆ ಬೈಯಪ್ಪನಹಳ್ಳಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಬಗ್ಗೆ ರೈಲ್ವೆ ಎಸ್ಪಿ ಡಾ. ಸೌಮ್ಯಲತಾ ಪ್ರತಿಕ್ರಿಯಿಸಿದ್ದು, ಹುಳಿಮಾವು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ನಿನ್ನೆ ರಾತ್ರಿ ಹೂಸಗೂರಿನಲ್ಲಿ ರೈಲ್ವೆ ಗೇಟ್ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ತನ್ನ ಹೆಂಡತಿ ಹಾಗೂ ಮಾವ ಕಿರುಕುಳ ನೀಡುತ್ತಿರುವುದಾಗಿ ಎಂದು ಡೆತ್ ನೋಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಮೃತನ ತಾಯಿ ನೀಡಿದ ದೂರು ಆಧರಿಸಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಮೃತನ ತಾಯಿ ಬಸಮ್ಮ ನೀಡಿದ ದೂರಿನಲ್ಲಿ ತಿಪ್ಪಣ್ಣ ಪತ್ನಿ ಪಾರ್ವತಿ, ಮಾವ ಯಮುನಪ್ಪ ಹಾಗೂ ಮಲ್ಲಪ್ಪ ಹೆಸರು ಉಲ್ಲೇಖಿಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ತನಿಖೆ ಮುಂದುವರೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ;ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಆತ್ಮಹತ್ಯೆಯ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಯಾರಾದರೂ ನಿಮ್ಮ ನೋವನ್ನು ಕೇಳಲು ಇರುತ್ತಾರೆ. ಅದಕ್ಕಾಗಿ ಸ್ನೇಹ ಫೌಂಡೇಶನ್‌ಗೆ ಕರೆ ಮಾಡಿ - 04424640050 (24x7 ಲಭ್ಯವಿದೆ) ಅಥವಾ iCall, ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನ ಸಹಾಯವಾಣಿ - 9152987821, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10ರ ವರೆಗೆ ಲಭ್ಯವಿರುತ್ತದೆ).

ಇದನ್ನೂ ಓದಿ:ಬೆಂಗಳೂರಿನಲ್ಲಿ ಜಾಮೀನು ಮಾಫಿಯಾ: ನಕಲಿ ಜಾಮೀನಿಗೆ ₹5 ಸಾವಿರ! ದಂಧೆ ಬಯಲಿಗೆಳೆದ ಪೊಲೀಸರು, 13 ಮಂದಿ ಸೆರೆ

Last Updated : Dec 14, 2024, 7:12 PM IST

ABOUT THE AUTHOR

...view details