ಕರ್ನಾಟಕ

karnataka

ETV Bharat / state

ವಿಜಯಪುರ: ಶಾಲೆಯಲ್ಲೇ ಮುಖ್ಯೋಪಾಧ್ಯಾಯ ಆತ್ಮಹತ್ಯೆ - Headmaster Found Dead - HEADMASTER FOUND DEAD

ಶಾಲೆಯಲ್ಲಿಯೇ ಮುಖ್ಯೋಪಾಧ್ಯಾಯರ ಶವ ಪತ್ತೆಯಾದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

headmaster
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Aug 8, 2024, 6:44 AM IST

ವಿಜಯಪುರ: ಶಾಲೆಯ ಸ್ಟಾಕ್ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮುಖ್ಯೋಪಾಧ್ಯಾಯರ ಶವ ಪತ್ತೆಯಾಗಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಾಗೂರು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಘಟನೆ ನಡೆದಿದೆ.

ಸಿ.ಎಸ್.ಹಡಪದ ಶವವಾಗಿ ಪತ್ತೆಯಾದ ಮುಖ್ಯೋಪಾಧ್ಯಾಯರು. ಇವರು ಕಳೆದ ಎರಡು ವರ್ಷದಿಂದ ನಾಗೂರು ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶಾಲಾ ಅವಧಿ ಮುಗಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಹಾಗೂ ಇತರ ಶಿಕ್ಷಕರು ಶಾಲೆಯ ಎಸ್​ಡಿಎಂಸಿ ಅಧ್ಯಕ್ಷರ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ. ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಸರ್ಕಾರಿ ನೌಕರರ ಸಂಘದಿಂದಲೂ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆ ಬಳಿಕ ಸತ್ಯಾಂಶ ತಿಳಿದು ಬರಲಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ:ಬೆಳಗಾವಿ ಅಗ್ನಿ ದುರಂತ: ಚೀಲದಲ್ಲಿ ಮಗನ ಮೃತದೇಹದ ಅವಶೇಷ ತುಂಬಿಕೊಂಡು ಕಣ್ಣೀರಿಡುತ್ತಾ ಅಂತ್ಯಕ್ರಿಯೆಗೆ ಹೊರಟ ತಂದೆ! - Belagavi Fire Accident

ABOUT THE AUTHOR

...view details