ಕರ್ನಾಟಕ

karnataka

ETV Bharat / state

ಸಾವರ್ಕರ್ ಮಾಂಸಹಾರಿ, ಗೋ ಹತ್ಯೆ ವಿರೋಧಿಯಲ್ಲ: ದಿನೇಶ್ ಗುಂಡೂರಾವ್ - Dinesh Gundurao - DINESH GUNDURAO

ಸಾವರ್ಕರ್ ರಾಷ್ಟ್ರೀಯವಾದಿ ಆಗಿದ್ದರೂ ಅವರ ಮೂಲಭೂತವಾದ ನಮ್ಮ ದೇಶದ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹೇಳಿದ್ದಾರೆ.

Minister Dinesh Gundurao
ಸಚಿವ ದಿನೇಶ್ ಗುಂಡೂರಾವ್ (ETV Bharat)

By ETV Bharat Karnataka Team

Published : Oct 3, 2024, 5:21 PM IST

ಬೆಂಗಳೂರು: "ಚಿತ್ಪಾವನ್ ಬ್ರಾಹ್ಮಣ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು.‌ ಮಾಂಸಹಾರ ಸೇವನೆಯನ್ನು ಅವರು ಬಹಿರಂಗವಾಗಿಯೇ ಸಮರ್ಥಿಸುತ್ತಿದ್ದರು. ಅಷ್ಟೇ ಅಲ್ಲದೇ, ಅವರು ಗೋಹತ್ಯೆಯನ್ನು ವಿರೋಧಿಸುತ್ತಿರಲಿಲ್ಲ. ಹಾಗಾಗಿ, ಒಂದು ರೀತಿಯಲ್ಲಿ ಸಾವರ್ಕರ್ ಮಾಡರ್ನಿಷ್ಟ್ ಆಗಿಯೂ ಕಾಣುತ್ತಾರೆ. ಆದರೆ ಮೂಲಭೂತವಾದಿಯಾಗಿದ್ದರು ಎಂಬುದರಲ್ಲಿ ಸಂಶಯವಿಲ್ಲ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಗಾಂಧಿ ಜಯಂತಿ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಆಯೋಜಿಸಿದ್ದ 'ಗಾಂಧೀಜಿಯ ಹಂತಕ' ಪುಸ್ತಕ ಬಿಡುಗಡೆ ಹಾಗು ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾಷಣ (ETV Bharat)

"ಗೋಡ್ಸೆಗೆ ಉತ್ತರ ಗಾಂಧೀಜಿಯವರೇ. ಗಾಂಧೀಜಿಯವರ ಹತ್ಯೆ ಮಾಡಿದ ಗೋಡ್ಸೆ, ಸಾವರ್ಕರ್ ವಾದದಿಂದ ಪ್ರಭಾವಿತರಾಗಿದ್ದರು. ದೇಶದಲ್ಲಿ ಇಂದು ಗಾಂಧೀವಾದೆದುರು ಸಾವರ್ಕರ್ ಅವರ ವಾದ ಗೆಲ್ಲುತ್ತಿದೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ಸಾವರ್ಕರ್ ಅವರಲ್ಲಿ ವೈಚಾರಿಕ ಚಿಂತನೆಗಳು, ರಾಷ್ಟ್ರೀಯವಾದ ಕಾಣಲು ಸಾಧ್ಯವಾದರೂ, ಪ್ರಜಾಪ್ರಭುತ್ವದ ಪರವಾದ ವ್ಯಕ್ತಿತ್ವ ಇರಲಿಲ್ಲ. ಆದರೆ ಗಾಂಧೀಜಿ ಅವರದ್ದು ಡೆಮಾಕ್ರಾಟಿಕ್ ವ್ಯಕ್ತಿತ್ವ" ಎಂದರು.

ಮುಂದುವರೆದು, "ಮೂಲಭೂತವಾದ ನಮ್ಮ ಭಾರತ ದೇಶದ ಸಂಸ್ಕೃತಿಯಲ್ಲ. ಇದು ಯುರೋಪ್​ನಿಂದ ಬಂದಿರುವಂಥದ್ದು. ಸಾವರ್ಕರ್ ಯೂರೋಪ್​ನಿಂದ ಸಾಕಷ್ಟು ಪ್ರಭಾವ ಹೊಂದಿದ್ದರು" ಎಂದು ತಿಳಿಸಿದರು.

"ಇಂದು ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಪ್ರದಾಯಸ್ಥರಿದ್ದಾರೆ. ಸಂಪ್ರದಾಯಸ್ಥರೆಲ್ಲ ಮೂಲಭೂತವಾದಿಗಳಲ್ಲ ಎಂಬುದನ್ನು ನಾವು ಅರಿತುಕೊಳ್ಳಬೇಕು. ಮೂಲಭೂತವಾದದ ವಿರುದ್ಧದ ಹೋರಾಟದಲ್ಲಿ ಈ ಅಂಶವನ್ನು ಅರಿತು ನಾವು ಮುಂದೆ ಸಾಗಬೇಕಿದೆ. ಈ ನಿಟ್ಟಿನಲ್ಲಿ 'ಗಾಂಧೀಜಿಯ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ' ಪುಸ್ತಕ ಗಾಂಧೀಜಿಯವರ ಬಗ್ಗೆ ಸಾಕಷ್ಟು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದೆ. ಯಾರ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸದೇ, ವಿವರಗಳನ್ನು ಮಾತ್ರ ನೀಡಿರುವುದು ಪುಸ್ತಕದ ವಿಶೇಷ. ನಮ್ಮ ಯುವಕರು ಇಂಥ ಪುಸ್ತಕಗಳನ್ನು ಹೆಚ್ಚು ಓದುವ ಮೂಲಕ ನಿಜಾಂಶಗಳನ್ನು ತಿಳಿದುಕೊಳ್ಳಬೇಕು" ಎಂದು ಸಲಹೆ ಹೇಳಿದರು.

ಇದನ್ನೂ ಓದಿ:'ನನ್ನ ತಿಥಿ ಬೇಡ, ಪ್ರತಿ ವರ್ಷ ಗಾಂಧಿ ಜಯಂತಿ ಆಚರಿಸಿ': ಅಪ್ಪಟ ಗಾಂಧಿವಾದಿಯ ಸ್ಫೂರ್ತಿದಾಯಕ ಕಥೆ - Gandhi Jayanti

ABOUT THE AUTHOR

...view details