ಉಡುಪಿ: ಭಾರೀ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ಜುಲೈ 5ರಂದು ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಆದೇಶ ಹೊರಡಿಸಿದ್ದಾರೆ.
ಮಳೆ: ಉಡುಪಿ ಜಿಲ್ಲೆಯ 3 ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ - Udupi Rain - UDUPI RAIN
ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳು, ಶಾಲೆ-ಕಾಲೇಜುಗಳಿಗೆ ಜು.5ರಂದು ರಜೆ ಘೋಷಣೆ ಮಾಡಲಾಗಿದೆ.
ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (ETV Bharat)
Published : Jul 4, 2024, 10:53 PM IST
ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐ.ಟಿ.ಐಗಳಿಗೆ ರಜೆ ನೀಡಲಾಗಿಲ್ಲ. ಕಾಲೇಜುಗಳಲ್ಲಿ ವಾಠ ಪ್ರವಚನಗಳನ್ನು ನಡೆಸುವಾಗ ಹಲವು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರು ಹಾಗೂ ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ.
- ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ.
- ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುವುವ ಬಗ್ಗೆ ಗಮನವಹಿಸುವುದು.
- ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಬೇಕು.
- ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು.
- ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆ ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟ ಸರಿದೂಗಿಸಬೇಕು.
- ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳ ನೀರು ಇರುವ ತಗು, ಪ್ರದೇಶ, ಕರೆ, ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.
- ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
- ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವುದಾಗಿ ಜಿಲ್ಲಾಡಳಿತ ಅಧಿಕಾರಿಗಳಿಗೆ ತಿಳಿಸಿದೆ.
ಇದನ್ನೂ ಓದಿ:ಹೊಸನಗರ: ಹಳ್ಳ ದಾಟುವಾಗ ಕಾಲು ಸಂಕದಿಂದ ಬಿದ್ದು ಮಹಿಳೆ ಸಾವು