ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಶಾಲೆ, ಪಿಯುಸಿ ತರಗತಿಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ, ಮಂಗಳೂರು ಎ ಹೋಬಳಿ, ಸುರತ್ಕಲ್ ಹೋಬಳಿ ಮತ್ತು ಗುರುಪುರ ಹೋಬಳಿ ವ್ಯಾಪ್ತಿಯ ಎಲ್ಲಾ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ರಜೆ ನೀಡಲಾಗಿದೆ.
ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರಿರುವ ತಗ್ಗು ಪ್ರದೇಶಗಳು, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ, ತೋಡುಗಳ ಮತ್ತು ವಿದ್ಯುತ್ ಕಂಬ, ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು, ಸಂಭಾವ್ಯ ಹಾನಿ ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ, ಸೂಚನೆಗಳನ್ನು ಪಾಲಿಸುವುದು, ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಕೂಡಲೇ ಸಂಬಂಧಪಟ್ಟ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆಯೂ ಸೂಚಿಸಲಾಗಿದೆ.
ಇದನ್ನೂ ಓದಿ:ಬೆಳ್ತಂಗಡಿ: ಭಾರೀ ಮಳೆಗೆ ದೇಗುಲದ ಪುರಾತನ ಅಶ್ವತ್ಥ ವೃಕ್ಷ ಧರಾಶಾಹಿ - Belthangady Rain