ಮಂಗಳೂರು:ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಗುರುವಾರ) ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ತಗ್ಗು ಪ್ರದೇಶಗಳಲ್ಲಿ ಎಚ್ಚರ:ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲೂ ಸೂಚಿಸಲಾಗಿದೆ. ನೀರು ನುಗ್ಗುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳಬಾರದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ತಿಳಿಸಲಾಗಿದೆ.