ಕರ್ನಾಟಕ

karnataka

ETV Bharat / state

ಚಾಮರಾಜನಗರದಲ್ಲಿ ವರುಣನ ಆರ್ಭಟ: ಧರೆಗುರುಳಿದ ಮರ, ನೆಲಕಚ್ಚಿದ ಬಾಳೆ - heavy rain - HEAVY RAIN

ಚಾಮರಾಜನಗರ ಜಿಲ್ಲಾ ಕೇಂದ್ರ ಹಾಗೂ ತಾಲೂಕಿನಾದ್ಯಂತ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಭಾರಿ ಮಳೆಯಾಗಿದೆ.

ಚಾಮರಾಜನಗರದಲ್ಲಿ ವರುಣಾರ್ಭಟ
ಚಾಮರಾಜನಗರದಲ್ಲಿ ವರುಣಾರ್ಭಟ (ETV Bharat)

By ETV Bharat Karnataka Team

Published : May 11, 2024, 3:12 PM IST

Updated : May 11, 2024, 5:22 PM IST

ಚಾಮರಾಜನಗರದಲ್ಲಿ ವರುಣನ ಆರ್ಭಟ (ETV Bharat)

ಚಾಮರಾಜನಗರ: ಎರಡು ದಿನ ಸಾಧಾರಣ ಮಳೆಯಾಗಿ ಬಿಡುವು ನೀಡಿದ್ದ ವರುಣ ಇಂದು ಮಧ್ಯಾಹ್ನ ದಿಢೀರ್ ಎಂಟ್ರಿ ಕೊಟ್ಟು​ ಇಳೆಗೆ ತಂಪೆರೆದಿದ್ದಾನೆ. ಚಾಮರಾಜನಗರ ಜಿಲ್ಲಾ ಕೇಂದ್ರ ಹಾಗೂ ತಾಲೂಕಿನಾದ್ಯಂತ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು - ಸಿಡಿಲು ಆರ್ಭಟದೊಂದಿಗೆ ಜೋರು ಮಳೆಯಾಗಿದ್ದು, ಬಿಸಿಲಿನಿಂದ ಬಸವಳಿದಿದ್ದ ಜನರು ಸಂತಸಗೊಂಡಿದ್ದಾರೆ. ಚಾಮರಾಜನಗರ, ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಬ್ಯಾಡಮೂಡ್ಲು, ಹೆಬ್ಬಸೂರು, ಚಂದಕವಾಡಿ, ಮರಿಯಾಲ, ಕೆಲ್ಲಂಬಳ್ಳಿ ಸುತ್ತಮುತ್ತ ಉತ್ತಮ ಮಳೆಯಾಗಿದೆ.

ಇನ್ನು, ಬಿರುಗಾಳಿ ರಭಸಕ್ಕೆ‌ ಚಾಮರಾಜನಗರದ ಚಾಮರಾಜೇಶ್ವರ ಉದ್ಯಾನವನದ ಭುವನೇಶ್ವರಿ ವಿಗ್ರಹದ ಬಳಿ ಭಾರಿ ಮರವೊಂದು ಧರೆಗುರುಳಿದೆ. ಅದೃಷ್ಟವಶಾತ್ ಆ ವೇಳೆ, ಉದ್ಯಾನವನದಲ್ಲಿ ಯಾರೂ ಇಲ್ಲದಿದ್ದರಿಂದ ಪ್ರಾಣಹಾನಿ ತಪ್ಪಿದೆ. ಹೆಬ್ಬಸೂರು, ಬ್ಯಾಡಮೂಡ್ಲು ಗ್ರಾಮಗಳಲ್ಲಿ ಬಿರುಗಾಳಿ ಸಹಿತ ಮಳೆಗೆ ಎಕರೆ ಗಟ್ಟಲೆ ಬಾಳೆ ಫಸಲು ನೆಲಕಚ್ಚಿದೆ.

ರೈತರ ಪ್ರತಿಭಟನೆ (ETV Bharat)

ಮಳೆ ನಡುವೆ ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ: ಮತ್ತೊಂದೆಡೆ, ಮಳೆ ನಡುಬೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘವು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ ಘಟನೆ ಬೆಂಗಳೂರು - ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಸೋಮವಾರಪೇಟೆ ಬಳಿ ನಡೆಯಿತು. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ಈ ವೇಳೆ ಭಾಗ್ಯರಾಜ್ ಮಾತನಾಡಿ, ರೈತರಿಗೆ ಬರ ಪರಿಹಾರ ನೀಡುವಲ್ಲಿ ಸರ್ಕಾರ ವೈಜ್ಞಾನಿಕ ವಿಧಾನವನ್ನು ಅನುಸರಿಸಿಲ್ಲ ಕಳೆದ ಮೂರು ದಿನಗಳ ಹಿಂದೆ ಬೀಸಿದ ಬಿರುಗಾಳಿಗೆ ಲಕ್ಷಾಂತರ ಹೆಕ್ಟರ್ ಪ್ರದೇಶದ ಬಾಳೆ, ಕಬ್ಬು, ತೆಂಗು, ಮೆಕ್ಕೆಜೋಳ ನಷ್ಟ ನಾಶವಾಗಿದ್ದು, ವೈಜ್ಞಾನಿಕವಾಗಿ ಬೆಳೆ ನಷ್ಟ ಪರಿಹಾರ ಘೋಷಿಸಬೇಕು. ಭೀಕರ ಬಿರುಗಾಳಿಯಿಂದ ನೊಂದಿರುವ ರೈತರ ಸಾಲವನ್ನು ರಾಜ್ಯ ಸರ್ಕಾರ ಸಂಪೂರ್ಣ ಸಾಲಮನ್ನಾ ಮಾಡಬೇಕು, ಪ್ರತಿ ಎಕರೆ ಬಾಳೆ ಬೆಳೆ ನಷ್ಟಕ್ಕೆ ಒಂದು ಲಕ್ಷಕ್ಕಿಂತ ಹೆಚ್ಚು ದರ ನೀಡಬೇಕು ಹಾಗೂ ಬರ ಪರಿಹಾರವನ್ನು ತಾರತಮ್ಯ ಇಲ್ಲದೇ ಎಲ್ಲ ರೈತರಿಗೂ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ಕಳೆದ ಸಾಲಿನ ಪ್ರತಿ ಟನ್​​​​ಗೆ 150 ರೂಪಾಯಿಯ ಸರ್ಕಾರ ಆದೇಶದ ಪ್ರಕಾರ ರಾಜ್ಯದಲ್ಲಿ 950 ಕೋಟಿ ರೂಪಾಯಿ ರೈತರಿಗೆ ಬರಬೇಕು ಕಳೆದ ಸಾಲಿನ ಕಾರ್ಖಾನೆಗಳಿಂದ ಲಾಭಾಂಶವನ್ನು ಹಂಚಿಕೆ ಮಾಡಿಸಬೇಕು ಹಾಗೂ ಖಾಸಗಿ ಮತ್ತು ಸಾಲ ಪಡೆದ ರೈತರಿಗೆ ಟ್ಯಾಕ್ಟರ್ ಗಳನ್ನು ಜಪ್ತಿ ಮಾಡಿ ಬೇರೆ ರಾಜ್ಯಗಳಿಗೆ ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತಿವೆ ಬ್ಯಾಂಕುಗಳು ಬರದಿಂದ ನೊಂದಿರುವ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್​ಗೆ 10 ರೂಪಾಯಿಯನ್ನು ಕೊಡಿಸಲು ಕ್ರಮ ವಹಿಸಬೇಕು ಹಾಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಮೈಸೂರು: ಬರಗಾಲದಲ್ಲಿ ವರವಾಗಿ ಬಂದ ವರುಣ, ಈಶ್ವರಗೌಡನಹಳ್ಳಿ ಗ್ರಾಮದಲ್ಲಿ ಹಬ್ಬದ ಸಂಭ್ರಮ - heavy rain

Last Updated : May 11, 2024, 5:22 PM IST

ABOUT THE AUTHOR

...view details