ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಎರಡು ದಿನ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ - Rain Red Alert

ಜೂನ್ 22ರಿಂದ ಎರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

rain
ಮಳೆ (ETV Bharat)

By ETV Bharat Karnataka Team

Published : Jun 21, 2024, 9:28 AM IST

ಮಂಗಳೂರು:ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 22 ರಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ಆರೆಂಜ್ ಅಲರ್ಟ್ ಇದೆ.

ಜೂನ್ 22 ಮತ್ತು 23ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರೆಡ್ ಹಾಗೂ ಆರೆಂಜ್ ಘೋಷಿಸಿರುವ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಉದ್ದಕ್ಕೂ ಹಾಗೂ ಇತರೆಡೆ ಚಂಡಮಾರುತ ರೀತಿಯ ವಾತಾವರಣ ಇರಲಿದೆ. ಗಾಳಿಯು ಗಂಟೆಗೆ 45 ರಿಂದ 55 ಕಿ.ಮೀ. ವೇಗದಲ್ಲಿ ಬೀಸಲಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ 10 ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗಲಿದೆ. ಆದ್ದರಿಂದ ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾನುವಾರವೂ ಕೂಡ 13 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಮುಂಗಾರು ಮಳೆ ಚುರುಕು: ಯಾವ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ? - Karnataka Rain Forecast

ABOUT THE AUTHOR

...view details