ಕರ್ನಾಟಕ

karnataka

ETV Bharat / state

ಮತ್ತೆ ವಾಯುಭಾರ ಕುಸಿತ: ಬೆಂಗಳೂರು ಸೇರಿ ರಾಜ್ಯದ 25 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

By ETV Bharat Karnataka Team

Published : 5 hours ago

rain
ಬೆಂಗಳೂರಲ್ಲಿ ಮಳೆ (IANS)

ಬೆಂಗಳೂರು:ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕರ್ನಾಟಕದ ಮೇಲೂ ಭಾರಿ ಪರಿಣಾಮ ಬೀಳುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಚಂಡಮಾರುತದ ಪರಿಣಾಮದಿಂದ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗಲಿದೆ. ಸದ್ಯ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದು ಮುಂದಿನ 2 ದಿನಗಳಲ್ಲಿ ಮತ್ತಷ್ಟು ತೀವ್ರಗೊಂಡು ಹಲವು ಅವಾಂತರ ಸೃಷ್ಟಿಸುವ ಸಾಧ್ಯತೆ ಇದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೆಚ್ಚಿನ ಮಳೆ ಬೀಳಲಿದೆ.

ಇದನ್ನೂ ಓದಿ:ಹಾವೇರಿ: ಹಳ್ಳದ ನಡುವೆ ಸಿಲುಕಿದ ಮೂವತ್ತಕ್ಕೂ ಅಧಿಕ ಭಕ್ತರು

ರಾಜಧಾನಿಯಲ್ಲಿ ಮಳೆ ಅಬ್ಬರ:ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಮಳೆ ಹೆಚ್ಚಾಗಿದ್ದು, ಇಂದೂ ಸಹ ಮಳೆ ಆಗುತ್ತಿದೆ. ಹೆಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಹಾಗೂ 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಜಧಾನಿ ಬೆಂಗಳೂರಿನಲ್ಲಿ 25.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಹಾಗೂ 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಹಾಗೂ 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ವರುಣಾರ್ಭಟ: ಇಂದೂ ಶಾಲೆಗಳಿಗೆ ರಜೆ ಘೋಷಣೆ

ABOUT THE AUTHOR

...view details