ಕರ್ನಾಟಕ

karnataka

ETV Bharat / state

ಉಡುಪಿ ಎಸ್​​ಸಿಡಿಸಿಸಿ ಮಹಿಳಾ ಉದ್ಯೋಗಿ ಆತ್ಮಹತ್ಯೆ: ಬ್ಯಾಂಕ್ ಮೇಲ್ವಿಚಾರಕರಿಗೆ ಹೈಕೋರ್ಟ್ ಜಾಮೀನು - Bank Employee Suicide Case - BANK EMPLOYEE SUICIDE CASE

ಉದ್ಯೋಗಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಬ್ಯಾಂಕ್ ಮೇಲ್ವಿಚಾರಕರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

high court
ಹೈಕೋರ್ಟ್ (ETV Bharat)

By ETV Bharat Karnataka Team

Published : May 17, 2024, 8:08 AM IST

ಬೆಂಗಳೂರು:ಉಡುಪಿಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ (ಎಸ್​​ಸಿಡಿಸಿಸಿ) ಮಹಿಳಾ ಉದ್ಯೋಗಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಬ್ಯಾಂಕ್ ಮೇಲ್ವಿಚಾರಕ ಉದಯ ಕುಮಾರ್ ಶೆಟ್ಟಿ ಎಂಬವರಿಗೆ ಗುರುವಾರ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತು.

ನಿರೀಕ್ಷಣಾ ಜಾಮೀನು ಕೋರಿ ಉದಯಕುಮಾರ್ ಶೆಟ್ಟಿ ಸಲ್ಲಿಸಿದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರ ಪೀಠ, ಅರ್ಜಿದಾರರು ತನಿಖಾಧಿಕಾರಿ ಮುಂದೆ ಹಾಜರಾಗಬೇಕು. ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿತು.

ಆಶಾ ಎಂಬವರು ಎಸ್​​ಸಿಡಿಸಿಸಿ ಬ್ಯಾಂಕ್​ನಲ್ಲಿ ಸಹಾಯಕ ಮ್ಯಾನೇಜರ್ ಆಗಿದ್ದರು. 2024ರ ಮಾರ್ಚ್​ 23ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಬಗ್ಗೆ ಅವರ ಪತಿ ಉಡುಪಿ ಜಿಲ್ಲೆಯ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

''ಆಶಾ ಮಾರ್ಚ್​​ 23ರಂದು ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಆದರೆ, ಆ ದಿನ ಮಧ್ಯಾಹ್ನ 12.30ರ ಸುಮಾರಿಗೆ ಬ್ಯಾಂಕ್ ಮ್ಯಾನೇಜರ್ ಮಹೇಶ್ ರಾವ್ ನನಗೆ ಕರೆ ಮಾಡಿ ''ನಿಮ್ಮ ಪತ್ನಿ ಕೆಲಸ ಮಧ್ಯಕ್ಕೆ ಬಿಟ್ಟು ಮನೆಗೆ ತೆರಳಿದ್ದಾರೆ'' ಎಂದು ತಿಳಿಸಿದ್ದರು. ಕೂಡಲೇ ನಾನು ಮನೆಗೆ ತೆರಳಿ ನೋಡಿದಾಗ ಪತ್ನಿ ಕೋಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿರುವುದು ಗೊತ್ತಾಯಿತು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದರು. ಬ್ಯಾಂಕ್ ಮೇಲ್ವಿಚಾರಕ ಉದಯ ಕುಮಾರ್ ಶೆಟ್ಟಿ, ಆಶಾ ಮೇಲೆ ಹಣದ ವಂಚನೆ ಆರೋಪ ಮಾಡಿದ್ದರು. ಹಣ ಮರುಪಾವತಿಗಾಗಿ ಒತ್ತಾಯಿಸುತ್ತಿದ್ದರು. ಹಣ ವಾಪಸ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಹೇಳಿದ್ದರು. ಇದರಿಂದಲೇ ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ'' ಎಂದು ಪತಿ ಆರೋಪಿಸಿದ್ದರು.

ಇದರಿಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವುದು ಸೇರಿದಂತೆ ಇನ್ನಿತರ ಆರೋಪಗಳ ಮೇಲೆ ಪೊಲೀಸರು ಉದಯ ಕುಮಾರ್ ಶೆಟ್ಟಿ ಮೇಲೆ ಎಫ್‌ಐಆರ್ ದಾಖಲಿಸಿದ್ದರು. ಬಂಧನ ಭೀತಿ ಎದುರಾದ ಕಾರಣ ನಿರೀಕ್ಷಣಾ ಜಾಮೀನು ಕೋರಿ ಉದಯ ಕುಮಾರ್ ಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ಓದಿ:ಆಸ್ತಿ ತೆರಿಗೆ ಬಾಕಿ ಪಾವತಿಸುವ ಭರವಸೆ: ಇಂದಿನಿಂದ ಬೆಂಗಳೂರಿನ ಮಂತ್ರಿ ಮಾಲ್ ಓಪನ್ - Mantri Mall

ABOUT THE AUTHOR

...view details