ಕರ್ನಾಟಕ

karnataka

ETV Bharat / state

ಹೈಕೋರ್ಟ್ ಪ್ರಾಂಗಣದಲ್ಲಿ ವಕೀಲರ ಸಂಘಕ್ಕೆ ಮತಗಟ್ಟೆ ನಿರ್ಮಿಸುವಂತೆ ಅರ್ಜಿ; ನೋಟಿಸ್ ಜಾರಿ - HIGH COURT

ಹೈಕೋರ್ಟ್ ಪ್ರಾಂಗಣದಲ್ಲಿ ವಕೀಲರ ಸಂಘಕ್ಕೆ ಮತಗಟ್ಟೆ ನಿರ್ಮಿಸಲು ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಸಂಘದ ಉನ್ನತಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದೆ.

HIGH COURT
ಹೈಕೋರ್ಟ್ (ETV Bharat)

By ETV Bharat Karnataka Team

Published : Feb 4, 2025, 10:24 PM IST

ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಚುನಾವಣೆಗೆ ಹೈಕೋರ್ಟ್ ಆವರಣದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪಿಸಲು ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸಂಘದ ಚುನಾವಣೆಯ ಮುಖ್ಯ ಚುನಾವಣಾಧಿಕಾರಿ/ಉನ್ನತಾಧಿಕಾರ ಸಮಿತಿ ಹಾಗೂ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು ವಕೀಲರ ಸಂಘದ ಸದಸ್ಯರು ಹಾಗೂ ಮತದಾರರು ಆಗಿರುವ ಎಂ.ಚಾಮರಾಜ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಅಲ್ಲದೆ, ಅರ್ಜಿ ಸಂಬಂಧ ಸಂಘದ ಚುನಾವಣೆಯ ಮುಖ್ಯ ಚುನಾವಣಾಧಿಕಾರಿ/ಉನ್ನತಾಧಿಕಾರ ಸಮಿತಿ ಹಾಗೂ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಫೆಬ್ರವರಿ 6ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ವಕೀಲರ ಸಂಘದ ಹೈಕೋರ್ಟ್ ವಿಭಾಗದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಸದಸ್ಯರಿದ್ದಾರೆ. ಇದರಲ್ಲಿ ಅನೇಕರು ಹಿರಿಯರಿದ್ದಾರೆ. ಹೈಕೋರ್ಟ್ ವಿಭಾಗದ ಚುನಾವಣೆಯಲ್ಲಿ ಸದಸ್ಯರು ಮತ್ತು ಮತದಾರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಹೈಕೋರ್ಟ್ ಪ್ರಾಂಗಣದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪಿಸುವಂತೆ ಉನ್ನತಾಧಿಕಾರ ಸಮಿತಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.

ಪೆಬ್ರುವರಿ 16ರ ಚುನಾವಣೆ:ಬೆಂಗಳೂರು ವಕೀಲರ ಸಂಘದ 2025-28ನೇ ಸಾಲಿನ ಆಡಳಿತ ಮಂಡಳಿಯ ಆಯ್ಕೆಗೆ ಫೆಬ್ರವರಿ 16ಕ್ಕೆ ಚುನಾವಣೆ ನಿಗದಿಪಡಿಸಿರುವ ಉನ್ನತಾಧಿಕಾರ ಸಮಿತಿ ಮತ್ತು ಮುಖ್ಯ ಚುನಾವಣಾ ಅಧಿಕಾರಿಯು ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಫೆಬ್ರವರಿ 6 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಫೆಬ್ರವರಿ 16ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ:ರಾಜ್ಯ ಮಾಹಿತಿ ಆಯುಕ್ತರ ನೇಮಕಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ - KARNATAKA INFORMATION COMMISSION

ABOUT THE AUTHOR

...view details