ಕರ್ನಾಟಕ

karnataka

ETV Bharat / state

ರಸ್ತೆ ವಿಸ್ತರಣೆ: ನಾಗವನ ಉಳಿಸುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಎನ್​ಹೆಚ್‌ಎಐಗೆ ಸೂಚನೆ - High Court

ರಸ್ತೆ ವಿಸ್ತರಣೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯು ಹೈಕೋರ್ಟ್​ನಲ್ಲಿ ನಡೆಯಿತು.

high-court
ರಸ್ತೆ ಅಗಲೀಕರಣ: ನಾಗವನ ಉಳಿಸುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಎನ್​ಹೆಚ್‌ಎಐಗೆ ಸೂಚನೆ

By ETV Bharat Karnataka Team

Published : Apr 6, 2024, 7:29 AM IST

ಬೆಂಗಳೂರು :ರಸ್ತೆ ವಿಸ್ತರಣೆ ಸಂದರ್ಭದಲ್ಲಿ ಪೆರ್ಡೂರಿನ ಅನಂತ ಪದ್ಮನಾಭ ದೇವಾಲಯದ ನಾಗವನವನ್ನು ಉಳಿಸುವ ಕುರಿತಂತೆ ಪರಿಶೀಲಿಸಿ, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ರಸ್ತೆ ಅಗಲೀಕರಣವನ್ನು ಪ್ರಶ್ನಿಸಿ ಪೆರ್ಡೂರಿನ ರಂಜಿತ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ವಿಭಾಗೀಯ ಪೀಠ ಈ ಸೂಚನೆ ನೀಡಿದೆ. ಅಲ್ಲದೇ, ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಿಗೆ ಹೈಕೋರ್ಟ್​​ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ:ಚುನಾವಣಾ ಅಕ್ರಮ ಆರೋಪ: ಶಾಸಕಿ ಶಶಿಕಲಾ ಜೊಲ್ಲೆ ವಿರುದ್ಧದ ಪ್ರಕರಣ ರದ್ದು - Shashikala Jolle

ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರು, ''ಪೆರ್ಡೂರಿನ ಐತಿಹಾಸಿಕ ಹಾಗೂ ಪ್ರಾಚೀನ ಅನಂತ ಪದ್ಮನಾಭ ದೇವಾಲಯ, ರಥಬೀದಿ ಹಾಗೂ ನಾಗವನ ಜಾಗದಲ್ಲಿಯೇ ಅಗಲೀಕರಣ ಕಾರ್ಯ ನಡೆಯಲಿದೆ. ಈ ಕುರಿತ ಭೂ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದಾಗಲೇ ದೇವಾಲಯದ ಭಕ್ತರು ಆಕ್ಷೇಪ ವ್ಯಕ್ತಪಡಿಸಿ 2022 ರ ಡಿಸೆಂಬರ್​ 19 ರಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ, ಆ ಮನವಿಯನ್ನು ಪರಿಗಣಿಸಿಲ್ಲ. ರಸ್ತೆ ಅಗಲೀಕರಣವನ್ನು ಹೆದ್ದಾರಿ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಕೈಗೆತ್ತಿಕೊಳ್ಳಲಾಗಿದೆ. ಆದ್ದರಿಂದ ಹೆದ್ದಾರಿ ಅಗಲೀಕರಣಕ್ಕೆ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬೇಕು'' ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರಿ ವಕೀಲರು, ''ಸದ್ಯ ಅಗಲೀಕರಣಕ್ಕೆ ಭೂ ಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ನಾಗವನದ ಕುರಿತು ಮಾಹಿತಿ ಇಲ್ಲ. ದೇವಾಲಯದ ಜಾಗ ಬಿಟ್ಟು ಹೆದ್ದಾರಿ ಅಗಲೀಕರಣ ಮಾಡಬಹುದೇ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ನ್ಯಾಯಾಲಯಕ್ಕೆ ತಿಳಿಸಲಾಗುವುದು'' ಎಂದು ಭರವಸೆ ನೀಡಿದರು.

ಇದನ್ನೂ ಓದಿ:ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಪ್ರಚಾರ: ಎಫ್‌ಐಆರ್ ರದ್ದುಕೋರಿ ಹೈಕೋರ್ಟ್​​ ಮೆಟ್ಟಿಲೇರಿದ ಬಿ.ವೈ.ರಾಘವೇಂದ್ರ - Raghavendra appeals HC

ABOUT THE AUTHOR

...view details