ಕರ್ನಾಟಕ

karnataka

ETV Bharat / state

ಸಂಸದ ಯದುವೀರ್ ಒಡೆಯರ್​​ ಆಯ್ಕೆ ಅಸಿಂಧು ಕೋರಿ ಅರ್ಜಿ : ನೋಟಿಸ್ ಜಾರಿ ಮಾಡಿದ ಹೈಕೋರ್ಟ್ - HIGH COURT

ಬಿಎಸ್ಪಿ ಪಕ್ಷದ ರೇವತಿ ರಾಜ್ ಚುನಾವಣೆ ವೇಳೆ ತಮ್ಮ ನಾಮ ಪತ್ರ ತಿರಸ್ಕರಿಸಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

NOTICE TO ELECTION COMMISSION  NOTICE TO MP YADUVEER WADIYAR  BENGALURU  BSP REVATHI RAJ
ಹೈಕೋರ್ಟ್ (ETV Bharat)

By ETV Bharat Karnataka Team

Published : Jan 25, 2025, 9:13 AM IST

ಬೆಂಗಳೂರು :ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದಿಂದ ಸ್ಪರ್ಧಿಸಿದ್ದ ರೇವತಿ ರಾಜ್ ಅವರ ನಾಮಪತ್ರ ತಿರಸ್ಕರಿಸಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್​ ಚುನಾವಣಾ ಆಯೋಗ ಮತ್ತು ಸಂಸದ ಯದುವೀರ್​ಗೆ ನೋಟಿಸ್ ಜಾರಿ ಮಾಡಿದೆ.

ಬಿಎಸ್ಪಿಯ ರೇವತಿ ರಾಜ್ ಅಲಿಯಾಸ್ ಭೀಮಪುತ್ರಿ ರೇವತಿ ರಾಜ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಜಿ. ಪಂಡಿತ್​ ಅವರ ಏಕಸದಸ್ಯ ಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

2024ರ ಏಪ್ರಿಲ್ 4ರಂದು ಆಯೋಗಕ್ಕೆ ನಾಮಪತ್ರ ಸಲ್ಲಿಸಲಾಗಿತ್ತು. ಆದರೆ, ನಾಮಪತ್ರದ ಕೆಲವು ಕಲಂಗಳಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಲ್ಲ. ಆದ ಕಾರಣ ಏಪ್ರಿಲ್ 5ರ ಬೆಳಗ್ಗೆ 11 ಗಂಟೆಯ ಒಳಗಾಗಿ ಸರಿಯಾಗಿ ಭರ್ತಿ ಮಾಡಿ ನಾಮಪತ್ರ ಸಲ್ಲಿಸಬೇಕು ಎಂದು ಚುನಾವಣಾಧಿಕಾರಿ ಸೂಚಿಸಿದ್ದರು.

ಸೂಕ್ತ ಸಮಯದಲ್ಲಿ ನಾಮಪತ್ರ ಸಲ್ಲಿಸಿದ್ದರೂ ತಮ್ಮ ನಾಮಪತ್ರ ತಿರಸ್ಕರಿಸಲಾಗಿದೆ. ಈ ಸಂಬಂಧ ರಾಜ್ಯ ಮಖ್ಯಚುನಾವಣಾ ಆಯುಕ್ತರಿಗೆ ಪತ್ರದ ಮೂಲಕ ದೂರು ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ. ತಮ್ಮ ನಾಮಪತ್ರ ತಿರಸ್ಕರಿಸಿದ್ದ ಅಂದಿನ ಚುನಾವಣಾಧಿಕಾರಿಯವರ ಆದೇಶವನ್ನು ರದ್ದು ಮಾಡಬೇಕು. ಯದುವೀರ್ ಆಯ್ಕೆ ಅಸಿಂಧುಗೊಳಿಸಿ, ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಹೊಸದಾಗಿ ಚುನಾವಣೆ ನಡೆಸಲು ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ಇದನ್ನೂ ಓದಿ:ಸಹಮತದ ಸಂಬಂಧವಿದೆ ಎಂದ ಮಾತ್ರಕ್ಕೆ ಮಹಿಳೆಯ ಮೇಲೆ ದೌರ್ಜನ್ಯವೆಸಗಲು ಪರವಾನಿಗೆ ನೀಡಿದಂತಾಗದು : ಹೈಕೋರ್ಟ್

ABOUT THE AUTHOR

...view details