ಕರ್ನಾಟಕ

karnataka

ETV Bharat / state

ಮತ್ತೊಮ್ಮೆ ಕೆಎಎಸ್​ ಪೂರ್ವಭಾವಿ ಪರೀಕ್ಷೆಗೆ ಕೋರಿ ಅರ್ಜಿ: ಸರ್ಕಾರ, ಕೆಪಿಎಸ್​ಸಿಗೆ ಹೈಕೋರ್ಟ್ ನೋಟಿಸ್ - HIGH COURT NOTICE TO KPSC

ಕೆಎಎಸ್​ ಪೂರ್ವಭಾವಿ ಪರೀಕ್ಷೆ ಮತ್ತೊಮ್ಮೆ ನಡೆಸುವಂತೆ ಕೆಪಿಎಸ್​ಸಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​ ಜಾರಿಗೊಳಿಸಿದೆ.

high court
ಹೈಕೋರ್ಟ್ (ETV Bharat)

By ETV Bharat Karnataka Team

Published : Jan 23, 2025, 8:20 PM IST

ಬೆಂಗಳೂರು:ಕರ್ನಾಟಕ ಆಡಳಿತಾತ್ಮಕ ಸೇವೆಗಳ (ಕೆಎಎಸ್​) ಆಯ್ಕೆಗೆ ಮತ್ತೊಂದು ಬಾರಿ ಪೂರ್ವಭಾವಿ ಪರೀಕ್ಷೆ ನಡೆಸುವಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್​ಸಿ) ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​ ಜಾರಿ ಮಾಡಿದೆ.

ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್​.ದೇವದಾಸ್​ ಅವರಿದ್ದ ನ್ಯಾಯಪೀಠ, ಸರ್ಕಾರ ಮತ್ತು ಕೆಪಿಎಸ್​ಸಿಗೆ ನೋಟಿಸ್​ ಜಾರಿ ಮಾಡಿ ವಿಚಾರಣೆ ಮುಂದೂಡಿತು. ಅಲ್ಲದೇ, ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡುವಂತೆ ನಿರ್ದೇಶನ ಕೋರಿದ್ದ ಅರ್ಜಿದಾರರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.

ನ್ಯಾಯಾಲಯಗಳು ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡುವಂತೆ ನಿರ್ದೇಶನ ನೀಡುವಂತೆ ಕೋರಲಾಗಿದೆ. ಆ ರೀತಿಯ ಅನುಮತಿ ನೀಡುವುದಕ್ಕೆ ಅವಕಾಶವಿಲ್ಲ. ನೀವು (ಅರ್ಜಿದಾರರು) ಏನನ್ನಾದರೂ ಮಾಡಬೇಕು ಎಂದಾದರೆ, ಅದನ್ನು ಕಾನೂನು ಪ್ರಕಾರ ಮುಂದುವರೆಸಬಹುದು. ಕಾನೂನಿಗೆ ಅನುಗುಣವಾಗಿ ನಡೆಯುವ ಪ್ರಕ್ರಿಯೆಗೆ ಅಡ್ಡಿಪಡಿಸಿದಲ್ಲಿ ಅದಕ್ಕೆ ನ್ಯಾಯಾಲಯದ ಮುಂದೆ ಬರಬಹುದು ಎಂದು ತಿಳಿಸಿದ ಪೀಠ ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''2024ರ ಆಗಸ್ಟ್​ 8ರಂದು ನಡೆದಿದ್ದ ಕೆಎಎಸ್​ ಪೂರ್ವಭಾವಿ ಪರೀಕ್ಷೆ ನಡೆಸಲಾಗಿತ್ತು. ಆ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆಗೆ ಸಂಬಂಧಿಸಿದಂತೆ ಹಲವು ತಪ್ಪುಗಳಿದ್ದವು. ಭಾಷಾಂತರ ಮಾಡುವಲ್ಲಿ ಯಡವಟ್ಟಾಗಿತ್ತು. ಹೀಗಾಗಿ, 2024ರ ಡಿಸೆಂಬರ್​ 29ರಂದು ಕನ್ನಡ ಭಾಷೆಯ ಪೂರ್ವಭಾವಿ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಲಾಗಿತ್ತು. ಆದರೆ, ಈ ಪರೀಕ್ಷೆಯಲ್ಲಿಯೂ ಕನ್ನಡ ಪತ್ರಿಕೆಯಲ್ಲಿ ಹಲವು ದೋಷಗಳು ಕಂಡು ಬಂದಿದ್ದು, ಕನ್ನಡ ಪತ್ರಿಕೆ 1ರಲ್ಲಿ 32 ದೋಷಗಳು ಮತ್ತು ಪತ್ರಿಕೆ 2ರಲ್ಲಿ 27 ದೋಷಗಳಿದ್ದ ಒಟ್ಟು 69 ದೋಷಗಳಿದ್ದವು'' ಎಂದು ಪೀಠಕ್ಕೆ ವಿವರಿಸಿದ್ದರು.

''ಮತ್ತೊಂದು ಬಾರಿ ಕನ್ನಡ ಭಾಷೆಯ ಪೂರ್ವಭಾವಿ ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಜನವರಿ 16ರಂದು ಮನವಿ ಸಲ್ಲಿಸಲಾಗಿದೆ. ಜೊತೆಗೆ, ಪೊಲೀಸರು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡುತ್ತಿಲ್ಲ. ಬದಲಿಗೆ ಒಂದು ದಿನಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಅದಕ್ಕೆ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಬೇಕು'' ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಇದನ್ನೂ ಓದಿ:ಅವಾಚ್ಯ ಪದ ಬಳಕೆ ಆರೋಪ: ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ABOUT THE AUTHOR

...view details