ಕರ್ನಾಟಕ

karnataka

ETV Bharat / state

ಹೊಳೆನರಸೀಪುರ ಠಾಣೆ ಪ್ರಕರಣ ರದ್ದು ಕೋರಿ ರೇವಣ್ಣ ಅರ್ಜಿ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ - High Court - HIGH COURT

ಹೆಚ್.ಡಿ.ರೇವಣ್ಣ ಅವರು ಹೊಳೆನರಸೀಪುರ ಟೌನ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧ ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್
ಹೈಕೋರ್ಟ್ (ETV Bharat)

By ETV Bharat Karnataka Team

Published : Jun 7, 2024, 10:40 PM IST

ಬೆಂಗಳೂರು: ಹಾಸನ ಜಿಲ್ಲೆ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ರದ್ದುಪಡಿಸುವಂತೆ ಕೋರಿ ಹೆಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಗೆ ಸಂಬಂಧ ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಪ್ರಕರಣದ ಕುರಿತು ವಾದ ಆಲಿಸಿದ ಪೀಠವು ಎಸ್‌ಐಟಿಗೆ ನೋಟಿಸ್, ಎರಡನೇ ಪ್ರತಿವಾದಿಗೆ (ದೂರುದಾರ ಸಂತ್ರಸ್ತೆ) ತುರ್ತು ನೋಟಿಸ್ ಜಾರಿ ಮಾಡಿತು. ಅಲ್ಲದೇ, ವಿಚಾರಣೆಯನ್ನು ಜೂನ್ 21ಕ್ಕೆ ಮುಂದೂಡಲಾಗಿದೆ ಎಂದು ಆದೇಶಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಒಂದೊಮ್ಮೆ ನನ್ನ ಅರ್ಜಿಗೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದರೆ ನನ್ನ ಅರ್ಜಿಗೆ ಏನಾಗಬೇಕು ಎಂದು ಪೀಠವನ್ನು ಪ್ರಶ್ನಿಸಿದರು. ಆಗ ಪೀಠ, ನಿಮ್ಮ ಅರ್ಜಿಗೆ ಏನೂ ಆಗುವುದಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪಿದೆ ಎಂದು ಹೇಳಿ ವಿಚಾರಣೆ ಮುಂದೂಡಿದರು.

ಪ್ರಕರಣದ ಹಿನ್ನೆಲೆ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಏಪ್ರಿಲ್ 28 ರಂದು ಮಹಿಳೆಯೊಬ್ಬರು ಹೊಳೆನರಸೀಪುರ ಠಾಣೆಯಲ್ಲಿ ಹೆಚ್.ಡಿ.ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ರೇವಣ್ಣರನ್ನು ಮೊದಲ ಹಾಗೂ ಪ್ರಜ್ವಲ್​ನನ್ನು ಎರಡನೇ ಆರೋಪಿಯನ್ನಾಗಿಸಿ ಪೊಲೀಸರು ಐಪಿಸಿ ವಿವಿಧ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ.

ರೇವಣ್ಣ ಜಾಮೀನು ಅರ್ಜಿ ರದ್ಧತಿ ವಿಚಾರಣೆ ಮುಂದೂಡಿಕೆ:ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಹೆಚ್.ಡಿ. ರೇವಣ್ಣ ಅವರ ಜಾಮೀನು ರದ್ದುಪಡಿಸಬೇಕು ಎಂದು ಕೋರಿ ಎಸ್‌ಐಟಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜೂನ್ 21ಕ್ಕೆ ಮುಂದೂಡಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ದೀಕ್ಷಿತ್ ಅವರ ಪೀಠದ ಮುಂದೆ ಹಾಜರಾದ ರೇವಣ್ಣ ಪರ ವಕೀಲರು “ನೋಟಿಸ್ ಮಾತ್ರ ಸಿಕ್ಕಿದ್ದು, ದಾಖಲೆಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಹೀಗಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು” ಎಂದು ಕೋರಿದರು. ಇದನ್ನು ಪುರಸ್ಕರಿಸಿದ ಪೀಠವು ಅರ್ಜಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ:ಸಂತ್ರಸ್ತೆಯ ಅಪಹರಣ ಪ್ರಕರಣ: 5 ಗಂಟೆ ಎಸ್ಐಟಿ ವಿಚಾರಣೆ‌ ಎದುರಿಸಿ ನಿರ್ಗಮಿಸಿದ ಭವಾನಿ ರೇವಣ್ಣ - Bhavani Revanna

For All Latest Updates

ABOUT THE AUTHOR

...view details