ಕರ್ನಾಟಕ

karnataka

ETV Bharat / state

ಕೆಎಸ್​ಪಿಸಿಬಿ ಸದಸ್ಯ ಕಾರ್ಯದರ್ಶಿ ನೇಮಕಾತಿಗೆ ನೀಡಿದ್ದ ತಡೆ ಆದೇಶ ಮುಂದುವರಿಸಲು ಹೈಕೋರ್ಟ್ ನಿರಾಕರಣೆ - High Court

ಕೆಎಸ್​ಪಿಸಿಬಿ ಸದಸ್ಯ ಕಾರ್ಯದರ್ಶಿ ನೇಮಕಾತಿಗೆ ನೀಡಿದ್ದ ತಡೆ ಆದೇಶ ಮುಂದುವರಿಸಲು ಹೈಕೋರ್ಟ್ ನಿರಾಕರಣೆ ಮಾಡಿದೆ.

KSPCB  BENGALURU  HIGH COURT
ಕೆಎಸ್​ಪಿಸಿಬಿ ಸದಸ್ಯ ಕಾರ್ಯದರ್ಶಿ ನೇಮಕಾತಿಗೆ ನೀಡಿದ್ದ ತಡೆ ಆದೇಶ ಮುಂದುವರೆಸಲು ಹೈಕೋರ್ಟ್ ನಿರಾಕರಣೆ

By ETV Bharat Karnataka Team

Published : Apr 30, 2024, 8:59 AM IST

ಬೆಂಗಳೂರು:ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್​ಪಿಸಿಬಿ) ಸದಸ್ಯ ಕಾರ್ಯದರ್ಶಿ ಎಚ್.ಸಿ. ಬಾಲಚಂದ್ರ ಅವರ ನೇಮಕಾತಿಗೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ಮುಂದುವರಿಸಲು ಹೈಕೋರ್ಟ್‌ ನಿರಾಕರಿಸಿದೆ.

ಬಾಲಚಂದ್ರ ಅವರ ನೇಮಕಾತಿಗೆ ಆಕ್ಷೇಪಿಸಿ ನಗರದ ಎಂ.ಎಸ್‌. ಹೇಮಂತ ಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್‌ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ, ತಡೆಯಾಜ್ಞೆ ಮುಂದುವರೆಸಲು ನಿರಾಕರಿಸಿದೆ. ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ್ ವಿ. ರೋಣ ಅವರು, ಹಾಲಿ ಸದಸ್ಯ ಕಾರ್ಯದರ್ಶಿ ಸ್ನಾತಕೋತ್ತರ ಪದವಿಯಲ್ಲಿ ಬಂಗಾರದ ಪದಕ ವಿಜೇತರಿದ್ದು, ಪರಿಸರದ ವಿಷಯಗಳಲ್ಲಿ ಅವರಿಗೆ 16 ವರ್ಷಗಳ ಅನುಭವ ಹೊಂದಿದ್ದಾರೆ. ಅವರು 2024ರ ಜನವರಿ 11ರಂದು ಕಾರ್ಯಭಾರ ವಹಿಸಿಕೊಂಡಿದ್ದು, ತೃಪ್ತಿಕರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯಕ್ಕೆ ಅವರನ್ನು ಅವರ ಸ್ಥಾನದಿಂದ ಬದಲಾಯಿಸಿದರಿರುವುದು ಒಳ್ಳೆಯದು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅಧ್ಯಕ್ಷರ ಮತ್ತು ಸದಸ್ಯ ಕಾರ್ಯದರ್ಶಿ ಹುದ್ದೆಯನ್ನು ಐಎಎಸ್‌ ಮತ್ತು ಐಎಫ್‌ಎಸ್‌ ಹಂತದ ಅಧಿಕಾರಿಗಳಿಗೆ ಎರಡು ಮೂರು ವರ್ಷಗಳಿಗೆ ಮಾತ್ರವೇ ನೀಡಲಾಗುತ್ತಿರುವುದು ತರವಲ್ಲ. ಈ ಅಧಿಕಾರಿಗಳು ವರ್ಗಾವಣೆ ಹೊಂದುವ ಕಾರಣ ಇಂತಹ ಹುದ್ದೆಗಳಲ್ಲಿ ಕಾರ್ಯದ ಸ್ಥಿರತೆಯ ಅಭಾವ ಉದ್ಭವಿಸುತ್ತದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ಈ ಹಿಂದೆ ನೀಡಿದ್ದ ಮಧ್ಯಂತರ ತಡೆ ಆದೇಶ ವಿಸ್ತರಿಸಲು ನಿರಾಕರಿಸಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ:ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರು ಬಿದ್ದು ಮೃತಪಟ್ಟಲ್ಲಿ ರೈಲ್ವೆ ಇಲಾಖೆ ಪರಿಹಾರ ನೀಡಬೇಕು: ಹೈಕೋರ್ಟ್ - Railways Compensation

For All Latest Updates

ABOUT THE AUTHOR

...view details