ಕರ್ನಾಟಕ

karnataka

ಗೌರಿ ಲಂಕೇಶ್ ಹತ್ಯೆ ಕೇಸ್: ವಿಶೇಷ ತನಿಖೆ ನಡೆಸಿ ವರದಿ ಸಲ್ಲಿಸಲು ಕೋರಿದ್ದ ಮನವಿ ತಿರಸ್ಕೃತ - Gauri Lankesh Murder Case

By ETV Bharat Karnataka Team

Published : Jul 3, 2024, 7:02 AM IST

ವಿಶೇಷ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತು.

HIGH COURT
ಹೈಕೋರ್ಟ್ (ETV Bharat)

ಬೆಂಗಳೂರು:ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನದ ಬಳಿಕ ವಿಚಾರಣೆಯ ಸಂದರ್ಭದಲ್ಲಿ ಪೊಲೀಸರು ತಮಗೆ ದೈಹಿಕವಾಗಿ ಹಿಂಸೆ ನೀಡಿದ್ದು, ಆ ಬಗ್ಗೆ ವಿಶೇಷ ವಿಚಾರಣೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಆರೋಪಿಗಳು ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಪ್ರಕರಣದ ಆರೋಪಿಗಳಾದ ಸುಜಿತ್ ಕುಮಾರ್, ಮನೋಹರ ಯಡವೆ, ಅಮೋಲ್ ಕಾಳೆ ಮತ್ತು ಅಮಿತ್ ರಾಮಚಂದ್ರ ದಿಗ್ವೇಕರ್ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎನ್.ಎಸ್.ಸಂಜಯಗೌಡ ಅವರಿದ್ದ ಪೀಠ ನಡೆಸಿತು.

ತನಿಖೆಯ ಸಂದರ್ಭದಲ್ಲಿ ಆರೋಪಿಗಳಿಗೆ ಪೊಲೀಸರು ದೈಹಿಕ ಹಿಂಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ, ಅವರ ಮನವಿ ಪರಿಗಣಿಸಲಾಗದು ಎಂದು ಪೀಠ ಹೇಳಿತು.

ಗೌರಿ ಲಂಕೇಶ್ 2018ರಲ್ಲಿ ಕೊಲೆಯಾಗಿದ್ದರು. ಆರೋಪಿಗಳನ್ನು ಕರ್ನಾಟಕ ಹಾಗೂ ಹೊರ ರಾಜ್ಯದ ವಿವಿಧೆಡೆಯಿಂದ ಪೊಲೀಸರು ಬಂಧಿಸಿದ್ದರು.

ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಆರೋಪಿಗಳು, ನಮ್ಮನ್ನು ಬಂಧಿಸಿದ ಸಂದರ್ಭದಲ್ಲಿ ಕಾನೂನಿನ ರೀತಿ ನಮ್ಮ ಕುಟುಂಬ ಸದಸ್ಯರು ಅಥವಾ ಹತ್ತಿರದವರಿಗಾಗಲಿ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ. ಬಂಧನದ ನಂತರ ಪೊಲೀಸ್ ವಶದಲ್ಲಿದ್ದ ಸಂದರ್ಭದಲ್ಲಿ ಅತ್ಯಂತ ನಿಕೃಷ್ಟವಾಗಿ ನಡೆಸಿಕೊಂಡರು. ದೈಹಿಕವಾಗಿ ಚಿತ್ರಹಿಂಸೆ ನೀಡಿದ್ದಾರೆ. ಇದು ಕಾನೂನುಬಾಹಿರ ಕ್ರಮ. ಈ ಕುರಿತಂತೆ ವಿಶೇಷ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಬೇಕು ಎಂದು ಅವರು ಕೋರಿದ್ದರು.

ಇದನ್ನೂ ಓದಿ:ಲೈಂಗಿಕ ಕ್ರಿಯೆಗೆ ಅಸಮರ್ಥ, ವರದಕ್ಷಿಣೆ ಕಿರುಕುಳ ಆರೋಪಿಸಿ ಪತಿ ವಿರುದ್ಧ ಪತ್ನಿ ದಾಖಲಿಸಿದ್ದ ಪ್ರಕರಣ ರದ್ದು - High Court

ABOUT THE AUTHOR

...view details