ಕರ್ನಾಟಕ

karnataka

ETV Bharat / state

ಧಾರವಾಡ ಯೋಗೇಶ್‌ ಗೌಡ ಕೊಲೆ ಪ್ರಕರಣ: ಆರೋಪಿಗಳ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್​ - Yogesh Gowda Murder Case - YOGESH GOWDA MURDER CASE

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.

high court
ಹೈಕೋರ್ಟ್ (ETV Bharat)

By ETV Bharat Karnataka Team

Published : Aug 14, 2024, 6:50 AM IST

ಬೆಂಗಳೂರು:ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ವಿಚಾರಣೆ ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿಗಳಾದ ವಿಕ್ರಂ ಬಳ್ಳಾರಿ, ಕೀರ್ತಿಕುಮಾರ ಬಸವರಾಜ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಟಗಿ, ಮಹಾಬಲೇಶ್ವರ ಹೊಂಗಲ್ ಅಲಿಯಾಸ್ ಮುದುಕ ಹಾಗೂ ಬಸವರಾಜ ಮುತ್ತಗಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಅವುಗಳ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠವು ತೀರ್ಪು ಕಾಯ್ದಿರಿಸಿದೆ.

ಇದನ್ನೂ ಓದಿ:ಮುಡಾ, ವಾಲ್ಮೀಕಿ ಹಗರಣ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್​ಗೆ ಅರ್ಜಿ - MUDA Valmiki Scam

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್​ 15ರಂದು ಯೋಗೇಶ್‌ ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಮೊದಲಿಗೆ ತನಿಖೆ ನಡೆಸಿದ್ದ ಧಾರವಾಡ ಪೊಲೀಸರು 6ನೇ ಆರೋಪಿಗಳ ಬಗ್ಗೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಶಾಸಕ ವಿನಯ್​ ಕುಲಕರ್ಣಿ ಹೆಸರು ಕೈಬಿಡಲಾಗಿತ್ತು. ನಂತರ ತನಿಖೆ ನಡೆಸಿ, ದೋಷಾರೋಪ ಪಟ್ಟಿ ಸಲ್ಲಿಸಿದ್ದ ಸಿಬಿಐ, ಹೊಸದಾಗಿ 7 ರಿಂದ 21 ಆರೋಪಿಗಳನ್ನು ಸೇರ್ಪಡೆ ಮಾಡಿತ್ತು.

ಹೊಸ ಆರೋಪಿಗಳು ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಮರು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯವು 2024ರ ಜೂನ್​ 28ರಂದು ಆದೇಶಿಸಿತ್ತು. ಇದರಿಂದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿ, ಹೊಸದಾಗಿ ವಿಚಾರಣೆ ನಡೆಸುವುದರಿಂದ ಕಾನೂನು ತೊಡಕು ಉಂಟಾಗಲಿದೆ. ವಿಚಾರಣೆ ಸಹ ವಿಳಂಬವಾಗುತ್ತದೆ. ಆದ್ದರಿಂದ ಹೊಸ ಆರೋಪಿಗಳು ಸೇರ್ಪಡೆಯಾದಾಗ ಪ್ರಕರಣ ಯಾವ ಹಂತದಲ್ಲಿತ್ತೋ, ಅಲ್ಲಿಂದಲೇ ವಿಚಾರಣೆ ಮುಂದುರೆಸಲು ವಿಶೇಷ ನ್ಯಾಯಾಲಯಕ್ಕೆ ಆದೇಶಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ:ಪ್ರಿಯತಮೆಯ ಆತ್ಮಹತ್ಯೆಗೆ ಪ್ರಚೋದನೆ: ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ - Incitement To Suicide

ABOUT THE AUTHOR

...view details