ಕರ್ನಾಟಕ

karnataka

ETV Bharat / state

ಮೂಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಇಡಿ ತನಿಖಾ ಪ್ರಕ್ರಿಯೆ ಪ್ರಶ್ನಿಸಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - HIGH COURT RESERVED JUDGMENT

ನಟೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ ತನ್ನ ಆದೇಶ ಕಾಯ್ದಿರಿಸಿದೆ.

KN_BNG_HC_03_7211320
ಮೂಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ಇಡಿ ತನಿಖಾ ಪ್ರಕ್ರಿಯೆ ಪ್ರಶ್ನಿಸಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ (ETV Bharat)

By ETV Bharat Karnataka Team

Published : Jan 16, 2025, 10:45 PM IST

ಬೆಂಗಳೂರು:ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ಇದಕ್ಕೆ ಸಂಬಂಧಿಸಿದಂತೆ ದಾಖಲು ಮಾಡಿಕೊಂಡಿರುವ ತನ್ನ ಪ್ರಮಾಣಿತ ಹೇಳಿಕೆ ಪ್ರಶ್ನಿಸಿ ಮುಡಾ ಮಾಜಿ ಆಯುಕ್ತ ಡಿ ಬಿ ನಟೇಶ್ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.

ನಟೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತು.

ಅರ್ಜಿದಾರರ ಪರ ವಕೀಲರ ವಾದ ಇದಾಗಿತ್ತು:ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಹಂಚಿಕೆ ಮಾಡಲಾಗಿದ್ದ 14 ನಿವೇಶನಗಳನ್ನು ಒಳಗೊಂಡ ವಿಚಾರ ಕುರಿತು ಅಪರಾಧವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸಲು ಯತ್ನಿಸುತ್ತಿದೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಎರಡನೆಯದಾಗಿ ಜಾರಿ ನಿರ್ದೇಶನಾಲಯ ನಿರ್ದೇಶಕರು ಅಥವಾ ಅವರು ಸೂಚಿಸುವ ಅಧಿಕಾರಿಗಳು ಇದು ಶೋಧ ಮತ್ತು ಜಫ್ತಿ ನಡೆಸಲು ಸೂಕ್ತ ಪ್ರಕರಣ ಎಂದು ಹೇಳಬೇಕು. ಹಾಲಿ ಪ್ರಕರಣದಲ್ಲಿ ಜಂಟಿ ನಿರ್ದೇಶಕರು ಸಹಾಯಕ ನಿರ್ದೇಶಕರಿಗೆ ತನಿಖೆಗೆ ಅನುಮತಿಸಿದ್ದಾರೆ. ಇದಕ್ಕೆ ಹಣ ಅಕ್ರಮ ವರ್ಗಾವಣೆ ಕಾಯಿದೆ ಸೆಕ್ಷನ್ 17(1)ರಲ್ಲಿ ಅವಕಾಶವಿಲ್ಲ. ಈ ನೆಲೆಯಲ್ಲಿ ಇಡೀ ಶೋಧ ಮತ್ತು ಜಫ್ತಿ ಕಾರ್ಯಾಚರಣೆ ಕಾನೂನುಬಾಹಿರವಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಅಲ್ಲದೆ, ಜಫ್ತಿ ಆದಾಗ ಮಾತ್ರ ಸಮನ್ಸ್ ಜಾರಿ ಮಾಡಬೇಕು. ಆದರೆ, ಇಲ್ಲಿ ಯಾವುದೇ ಜಫ್ತಿ ಪ್ರಕ್ರಿಯೆ ನಡೆಯದಿದ್ದರೂ ಸಮನ್ಸ್ ಜಾರಿ ಮಾಡಲಾಗಿದೆ. ಇದರಿಂದ ಪ್ರಮಾಣಿತ ಹೇಳಿಕೆಯು ಕಾನೂನು ಬಾಹಿರವಾಗುತ್ತದೆ. ಇದೀಗ ಇಡಿ ನಡೆಸುತ್ತಿರುವುದು ತನಿಖೆ ಆತುರದಿಂದ ಕೂಡಿದೆ. ಹೀಗಾಗಿ ಇಡಿ ಪ್ರಕ್ರಿಯೆ ರದ್ದುಮಾಡಬೇಕು ಎಂದು ಕೋರಿದರು.

ಇಡಿ ಪರ ವಕೀಲರ ವಾದವೇನು?:ಜಾರಿ ನಿರ್ದೇಶನಾಲಯದ ಪರವಾಗಿ ವಾದಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಅರವಿಂದ್ ಕಾಮತ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ. ಇದರ ಅರ್ಥ ಅವರಿಗೆ ಅಕ್ರಮದ ಮಾಹಿತಿ ಇತ್ತು ಎಂಬುದಾಗಿದೆ. ಈ ನೆಲೆಯಲ್ಲಿ ಸಾಕ್ಷಿ ದಾಖಲಿಸಿಕೊಳ್ಳಲು ಅವರಿಗೆ ಸಮನ್ಸ್ ನೀಡಲಾಗಿದೆ. ಸದ್ಯ ನಟೇಶ್ ಅವರನ್ನು ಆರೋಪಿ ಎಂದು ಘೋಷಿಸಲಾಗಿಲ್ಲ. ನಟೇಶ್ ಅವರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಪಿಎಂಎಲ್ ಕಾಯಿದೆ ಸೆಕ್ಷನ್ 50ರ ಅಡಿ ಸಾಕ್ಷಿ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್ ನೀಡುವುದು ಅಥವಾ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲು ಇಡಿಗೆ ಅಧಿಕಾರವಿದೆ. ಅದರಂತೆ ಅವರ ಹೇಳಿಕೆ ದಾಖಲು ಪ್ರಕ್ರಿಯೆ ನಡೆಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಇದನ್ನು ಓದಿ:ತಮ್ಮ ರಕ್ಷಣೆಗಾಗಿ ಜಾತಿಗಣತಿ ಕಾರ್ಡ್ ಇಟ್ಟಿಕೊಂಡಿರುವ ಸಿದ್ದರಾಮಯ್ಯ: ಎಂಎಲ್ಸಿ ಹೆಚ್.‌ ವಿಶ್ವನಾಥ್

ABOUT THE AUTHOR

...view details