ಕರ್ನಾಟಕ

karnataka

ETV Bharat / state

ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ - High Court

ಬೆಂಗಳೂರು ನಗರ್ತಪೇಟೆಯ ಘಟನೆ ವಿರುದ್ಧ ಪ್ರತಿಭಟನೆ ನಡೆಸಿ ಸಾರ್ವಜನಿಕ ಶಾಂತಿ - ಸುವ್ಯವಸ್ಥೆಗೆ ಭಂಗ ತಂದಿರುವ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.

ಹೈಕೋರ್ಟ್​
high court

By ETV Bharat Karnataka Team

Published : Mar 22, 2024, 10:40 PM IST

ಬೆಂಗಳೂರು:ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕ ಮುಖೇಶ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆಗೈದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತಂದಿರುವ ಆರೋಪದಡಿ ಸಂಸದ ತೇಜಸ್ವಿಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಎಫ್‌ಐಆರ್‌ಗೆ ತಡೆ ನೀಡಿತು.

ವಿಚಾರಣೆ ವೇಳೆ ಅರ್ಜಿದಾರ ತೇಜಸ್ವಿ ಸೂರ್ಯ ಪರ ವಾದ ಮಂಡಿಸಿದ ವಕೀಲ ಪಿ. ಪ್ರಸನ್ನ ಕುಮಾರ್, ಆಜಾನ್ ಆಗುವ ವೇಳೆ ಧಾರ್ಮಿಕ ಹಾಡು ನುಡಿಸಿದರು ಎಂದು ಆರೋಪಿಸಿ ಕೆಲ ಯುವಕರು ಮುಖೇಶ್​​ ನ ಮೇಲೆ ಗಂಭೀರ ಹಲ್ಲೆ ನಡೆಸಿದರು. ಇದರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಅರ್ಜಿದಾರರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಅದಕ್ಕೆ ಯಾವುದೇ ಪುರಾವೆಗಳಿಲ್ಲ, ವಿನಾಕಾರಣ ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ರಾಜಕೀಯ ಪ್ರೇರಿತವಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಾಗಾಗಿ ಅದನ್ನು ರದ್ದುಪಡಿಸಬೇಕು ಎಂದು ಕೋರಿದ್ದರು.

ಇದನ್ನೂಓದಿ:ಶೋಭಾ ಕರಂದ್ಲಾಂಜೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ - High Court

ABOUT THE AUTHOR

...view details