ಕರ್ನಾಟಕ

karnataka

ETV Bharat / state

ಸಿಇಟಿಗೆ ಪಠ್ಯೇತರ ಪ್ರಶ್ನೆ ಪರಿಶೀಲನೆಗೆ ಸಮಿತಿ ರಚನೆ: ಮಧ್ಯಪ್ರವೇಶಕ್ಕೆ ಹೈಕೋರ್ಟ್‌ ದ್ವಿಸದಸ್ಯ ಪೀಠ ನಕಾರ - High Court

ಸಿಇಟಿಗೆ ಪಠ್ಯೇತರ ಪ್ರಶ್ನೆಗಳ ಆಯ್ಕೆ ಬಗ್ಗೆ ಪರಿಶೀಲನೆಗೆ ಸರ್ಕಾರ ರಚಿಸಿದ್ದ ಸಮಿತಿ ಕುರಿತಂತೆ ಮಧ್ಯಪ್ರವೇಶಿಸಲು ಹೈಕೋರ್ಟ್​ ದ್ವಿಸದಸ್ಯ ಪೀಠವೂ ಕೂಡ ನಿರಾಕರಿಸಿದೆ.

high court
ಹೈಕೋರ್ಟ್‌ (ETV Bharat)

By ETV Bharat Karnataka Team

Published : Jul 25, 2024, 9:43 PM IST

ಬೆಂಗಳೂರು:ವೃತ್ತಿಪರ ಕೋರ್ಸ್‌ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಪಠ್ಯೇತರವಾಗಿ ಆಯ್ಕೆ ಮಾಡಿಕೊಂಡಿದ್ದ ಪ್ರಶ್ನೆಗಳ ಕುರಿತಂತೆ ಪರಿಶೀಲಿಸಲು ಸರ್ಕಾರ ರಚನೆ ಮಾಡಿದ್ದ ಸಮಿತಿ ಕುರಿತು ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ.

ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ದಾಸರಹಳ್ಳಿ ನಿವಾಸಿ ತನ್ಮಯ್ ಎಂಬವರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಪ್ರಕರಣದ ಹಿನ್ನೆಲೆ:2024ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ನಡೆಸಿದ ಸಿಇಟಿ ಪರೀಕ್ಷೆಯಲ್ಲಿ ಸುಮಾರು 3 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆಯ ಅನುಸಾರ, ಸಿಇಟಿಯ ಪಠ್ಯಕ್ರಮದ ಹೊರತಾಗಿ 50 ಪ್ರಶ್ನೆಗಳನ್ನು ಪಠ್ಯೇತರದಿಂದ ಕೇಳಲಾಗಿತ್ತು. ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಕರು ದೂರಿದ್ದರು. ಈ ದೂರಿನ ಅನ್ವಯ ಸರ್ಕಾರವು ಸಮಿತಿಯನ್ನು ರಚಿಸಿತ್ತು. ಈ ನಡುವೆ ಅರ್ಜಿದಾರರ ವಿದ್ಯಾರ್ಥಿ, ಸಿಇಟಿಯಲ್ಲಿ 50 ಪ್ರಶ್ನೆಗಳನ್ನು ಕೈಬಿಡಲಾಗಿದೆ. ಹೀಗಾಗಿ, ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಕೌನ್ಸೆಲಿಂಗ್ ನಡೆಸುವ ಸಂದರ್ಭದಲ್ಲಿ 180 ಅಂಕಗಳ ಆಧಾರದಲ್ಲಿ ರ‍್ಯಾಂಕಿಂಗ್ ಪರಿಗಣಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಪ್ರಕರಣದಲ್ಲಿ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತ್ತು. ಆದರೆ, ಮಕ್ಕಳ ಶೈಕ್ಷಣಿಕ ವಿಷಯಕ್ಕೆ ಸಂಬಂಧಿಸಿದಂತೆ ಭವಿಷ್ಯದಲ್ಲಿ ಈ ರೀತಿಯಲ್ಲಿ ಗೊಂದಲಗಳಾಗದಂತೆ ಮತ್ತು ಮರುಕಳಿಸದಂತೆ ಎಚ್ಚರ ವಹಿಸಲು ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರ ವಿದ್ಯಾರ್ಥಿ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:ಹೆಣ್ಣು ಭ್ರೂಣ ಪತ್ತೆಗೆ ಸಹಕಾರ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಣೆ - High Court

ABOUT THE AUTHOR

...view details